ವಿಜಯಪುರ: ಸಮಾಜ ಕಲ್ಯಾಣ ಇಲಾಖೆಯಿಂದ ೨೦೨೪-೨೫ನೇ ಸಾಲಿಗಾಗಿ ಪರಿಶಿಷ್ಟ ಜಾತಿಯ ಹಾಗೂ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿಜಯಪುರ ಜಿಲ್ಲೆಯಲ್ಲಿ ವಾಸವಾಗಿರುವ ಪರಿಶಿಷ್ಟ ಜಾತಿಯ ಹಾಗೂ ಪರಿಶಿಷ್ಟ ಪಂಗಡದ ಕಾನೂನು ಪದವೀಧರರು ಆನ್‌ಲೈನ್ ಮೂಲಕ ಅರ್ಜಿಯನ್ನು ಪರಿಶಿಷ್ಟ ಜಾತಿ ಅಭ್ಯರ್ಥಿಗಳು sw.kar.nic.inರಲ್ಲಿ & ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು sw.kar.nic.in ರಲ್ಲಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ತಿಳಿಸಲಾಗಿದೆ. ಜೂನ್ ೧೮ ರಿಂದ ಅರ್ಜಿಸಲ್ಲಿಸಬಹುದಾಗಿದ್ದು, ಜುಲೈ ೩೧ ಕೊನೆಯ ದಿನವಾಗಿದೆ.
ಆನ್‌ಲೈನ್ ಅರ್ಜಿ ನಮೂನೆ ಹಾಗೂ ಅಗತ್ಯ ದಾಖಲೆಗಳಿಗೆ ಪತ್ರಾಂಕಿತ ಅಧಿಕಾರಿಗಳಿಂದ ದೃಢಿಕರಣದೊಂದಿಗೆ ಅರ್ಜಿಯನ್ನು ಉಪನಿರ್ದೇಶಕರು, ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಕಚೇರಿಗಳಿಗೆ ಸಲ್ಲಿಸತಕ್ಕದ್ದು ಮತ್ತು ಇತರೆ ಹೆಚ್ಚಿನ ವಿವರಗಳಿಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ವಿಜಯಪುರ ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಮಾಜಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲೀಕ ಮಾನವರ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
