ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ/ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ(ಆಂಗ್ಲ ಮಾಧ್ಯಮ) ಶಾಲೆಗಳ ೨೦೨೪-೨೫ನೇ ಸಾಲಿನ ೬ನೇ ತರಗತಿ ಪ್ರವೇಶಾತಿಗೆ ನಡೆಸಿದ ಪರೀಕ್ಷೆಯ ಮೆರಿಟ್ ಫಲಿತಾಂಶವನ್ನು ಪ್ರಕಟಿಸಲಾಗಿದ.
ಜೂನ್ ೧೪ರಂದು ಬೆಳಗ್ಗೆ ೯ ಗಂಟೆಯಿಂದ ಆಯ್ಕೆಗೊಂಡ ವಿದ್ಯಾರ್ಥಿ/ನಿಯರ ಕೌನ್ಸಲಿಂಗ್ ನ್ನು ಅಫಜಲ್‌ಪುರ್ ಟಕ್ಕೆಯಲ್ಲಿರುವ ಸರ್ಕಾರಿ ಮುಸ್ಲಿಂ ವಸತಿ ಶಾಲೆಯಲ್ಲಿ ಮಾಡಲಾಗುವುದು. ಸದರಿ ವಿದ್ಯಾರ್ಥಿಗಳು ತಮ್ಮ ಸಿಂಧೂವಾದ ಪ್ರವೇಶ ಪ್ರಮಾಣ ಪತ್ರವನ್ನು, ತಾವು ಆಯ್ಕೆಯೊಳಿಸಿದ ವಸತಿ ಶಾಲೆಗಳಿಗೆ ಸಂಬಂಧಪಟ್ಟ ದಾಖಲಾತಿಗಳನ್ನು ತೆಗೆದುಕೊಂಡು ಜೂನ್ ೨೧ರಂದು ಪ್ರವೇಶ ಪಡೆಯಲು ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳ ಪ್ರಾಂಶುಪಾಲರು ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ದೂ.೦೮೩೫೨-೨೯೫೫೨೩ಕ್ಕೆ ಸಂಪರ್ಕಿಸಬೇಕು ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸ್ತಿ ತೆರಿಗೆ ಪಾವತಿಸಲು ಜುಲೈ೩೧ರವರೆಗೆ ರಿಯಾಯತಿ
ವಿಜಯಪುರ, ಜೂನ್ ೧೨: ವಿಜಯಪುರ ಮಹಾನಗರಪಾಲಿಕೆ ವ್ಯಾಪ್ತಿಯ ಘೋಷಿತ ಆಸ್ತಿ ತೆರಿಗೆದಾರರಿಗೆ ೨೦೨೪-೨೫ನೇ ಸಾಲಿನ ಪ್ರಸಕ್ತ ಸಾಲಿನ ಆಸ್ತಿ ತೆರಿಗೆಯ ಮೇಲೆ ಶೇ.೫ರಷ್ಟು ರಿಯಾಯತಿಯನ್ನು ಜುಲೈ ೩೧ರವರೆಗೆ ವಿಸ್ತರಿಸಲಾಗಿದೆ. ಕಾರಣ ೨೦೨೪-೨೫ನೇ ಸಾಲಿನ ಆಸ್ತಿ ತೆರಿಗೆಯನ್ನು ನಿಗಧಿತ ಅವಧಿಯಲ್ಲಿ ಪಾವತಿಸಿ ರಿಯಾಯಿತಿಯ ಲಾಭ ಪಡೆದುಕೊಳ್ಳಲು ತಿಳಿಸಿದೆ. ಒಂದು ವೇಳೆ ನಿಗಧಿತ ಅವಧಿಯಲ್ಲಿ ಸ್ವಯಂ ಘೋಷಿತ ಆಸ್ತಿ ತೆರಿಗೆ ಭರಣಾ ಮಾಡದೇ ಹೋದಲ್ಲಿ ಮಹಾನಗರಪಾಲಿಕೆ ಕಾಯ್ದೆ-೧೯೭೬ರಂತೆ ದಂಡ ಹಾಗೂ ಕಾನೂನು ಕ್ರಮ ಜರಗಿಸಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ – ೨ : ೧೪೪ ಸೆಕ್ಷನ್ ಜಾರಿ
ವಿಜಯಪುರ, ಜೂನ್ ೧೨ (ಕರ್ನಾಟಕ ವಾರ್ತೆ): ಎಸ್‌ಎಸ್‌ಎಲ್‌ಸಿ ಪರೀಕ್ಷೆ – ೨ ಜೂನ್ ೧೪ ರಿಂದ ೨೨ ರವರೆಗೆ ನಡೆಯಲಿದ್ದು, ಒಟ್ಟು ೨೬ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಯನ್ನು ಸುಗಮವಾಗಿ ಮತ್ತು ಪರೀಕ್ಷಾ ಅವ್ಯವಹಾರ ತಡೆಗಟ್ಟಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ೧೪೪ ಸೆಕ್ಷನ್ ಜಾರಿಗೊಳಿಸಿ ೨೦೦ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ಭೂಬಾಲನ್ ಆದೇಶಿಸಿದ್ದಾರೆ.
ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಅಂಗಡಿ, ಇಂಟರ್ ನೆಟ್ ಕೇಂದ್ರ ಮುಚ್ಚುವಂತೆ ಹಾಗೂ ಪರೀಕ್ಷಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಯಾವುದೇ ಅಧಿಕಾರಿ ಅಥವಾ. ಸಿಬ್ಬಂದಿ ಮೊಬೈಲ್ ಪೋನ್ ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
