ವಿಜಯಪುರ: ವಿಜಯಪುರ ಮಹಾನಗರಪಾಲಿಕೆ ವತಿಯಿಂದ ೨೦೨೪-೨೫ನೇ ಸಾಲಿನ ಕೇಂದ್ರ ಪುರಸ್ಕೃತ ಯೋಜನೆಯಾದ ದೀನದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಉಪ ಘಟಕವಾರು ಭೌತಿಕ ಮತ್ತು ಆರ್ಥಿಕ ಗುರಿಯನ್ನು ನಿಗದಿಪಡಿಸಿದ್ದು, ಸ್ವಯಂ ಉದ್ಯೋಗ(ದ್ವಿ-ಪ್ರತಿ ಅರ್ಜಿ)-೭೮, ಗುಂಪು ಸಮೂಹ ಉದ್ಯಮಗಳು ಯೋಜನೆ – ೦೬, ಸ್ವಸಹಾಯ ಗುಂಪುಗಳ ರಚನೆ-೨೦೧, ಸ್ವಸಹಾಯ ಗುಂಪುಗಳ ಬ್ಯಾಂಕ ಲಿಂಕೇಜ್-೧೦೧ ಸದರಿ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬಿಪಿಎಲ್/ಅಂತ್ಯೋದಯ ರೇಷನ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್, ಮತದಾರರ ಗುರುತೀನ ಚೀಟಿ, ವಿದ್ಯಾರ್ಹತೆ ಪ್ರಮಾಣ ಪತ್ರ ಮತ್ತು ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ದ್ವಿಪ್ರತಿಯಲ್ಲಿ ಕನಿಷ್ಠ ೧೮ ರಿಂದ ೫೦ ವಯಸ್ಸಿನ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಜೂನ್ ೨೬ ರಂದು ಸಾಯಂಕಾಲ ೫ ಗಂಟೆಯ ಒಳಗಾಗಿ ಮಹಾನಗರ ಪಾಲಿಕೆಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಯಾಗಿ ಮಹಾನಗರಪಾಲಿಕೆಯ ಡೇ-ನಲ್ಮ್ ವಿಭಾಗವನ್ನು ಸಂಪರ್ಕಿಸಬಹುದು ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ದೀನದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರಜೀವನೋಪಾಯ ಅಭಿಯಾನದಡಿ ಅರ್ಜಿ ಆಹ್ವಾನ
Related Posts
Add A Comment
