ಬಸವನಬಾಗೇವಾಡಿ: ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಮಹಿಳಾ ವೇದಿಕೆ, ಐಕ್ಯೂಎಸಿ ಸಹಯೋಗದಲ್ಲಿ ಬೇಟಿ ಬಚಾವೊ ಬೇಟಿ ಪಡಾವೋ ಜನಜಾಗೃತಿ ಜಾಥಾವನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು. ಮಹಾವಿದ್ಯಾಲಯದ ಮುಂಭಾಗ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ವ್ಹಿ.ಸೂರ್ಯವಂಶಿ ಜಾಥಾಕ್ಕೆ ಚಾಲನೆ ನೀಡಿದರು.
ಜಾಥಾವು ಕಾಲೇಜಿನಿಂದ ಆರಂಭಗೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಸವೇಶ್ವರ ವೃತ್ತದಲ್ಲಿ ಜಾಥಾ ಸಮಾವೇಶಗೊಂಡ ನಂತರ ಜಾಥಾ ಉದ್ದೇಶಿಸಿ ಮಹಾವಿದ್ಯಾಲಯದ ಮಹಿಳಾ ವೇದಿಕೆ ಅಧ್ಯಕ್ಷೆ, ಇತಿಹಾಸ ಪ್ರಾಧ್ಯಾಪಕಿ ಡಾ.ಎಸ್.ಬಿ.ಜನಗೊಂಡ ಮಾತನಾಡಿ, ಪ್ರತಿಯೊಬ್ಬ ಪುರುಷನಿಗೆ ಹೆಣ್ಣು ತಾಯಿಯಾಗಿ, ಸಹೋದರಿಯಾಗಿ, ಪತ್ನಿಯಾಗಿ ಬೇಕು. ಅದೇ ಅವಳು ಮಗಳಾಗಿ ಬೇಡವಾಗಿರುವದು ನೋವಿನ ಸಂಗತಿ. ಇಂದು ಶಿಕ್ಷಣವು ಎಲ್ಲರ ಹಕ್ಕಾಗಿ ಪರಿವರ್ತನೆಯಾಗಿದ್ದರೂ ಸಹ ಸಮಾಜದಲ್ಲಿ ಹೆಣ್ಣಿನ ಶೋಷಣೆ ನಿಲ್ಲುತ್ತಿಲ್ಲ. ಪ್ರಜ್ಞಾವಂತರಾದ ನಾವೆಲ್ಲರೂ ಹೆಣ್ಣು ಭ್ರೂಣ ಹತ್ಯೆ ತಡೆಯವಲ್ಲಿ ಮುಂದಾಗಬೇಕು. ಆಗ ಮಾತ್ರ ಪ್ರತಿ ಪುರುಷನ ಬಾಳಿನಲ್ಲಿ ಹೆಣ್ಣು ತಾಯಿಯಾಗಿ, ಸಹೋದರಿಯಾಗಿ, ಪತ್ನಿಯಾಗಿ, ಮಗಳಾಗಿ ಬರಲು ಸಾಧ್ಯ. ಎಲ್ಲರೂ ಹೆಣ್ಣುಮಕ್ಕಳನ್ನು ಬೆಳೆಸುವ ಕಾರ್ಯ ಮಾಡಬೇಕೆಂದರು.
ಜಾಥಾದಲ್ಲಿ ಕಾಲೇಜಿನ ಐಕ್ಯೂಎಸಿ ಮತ್ತು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ದಿಲೀಪಕುಮಾರ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ರವೀಂದ್ರಗೌಡ ಕೆ.ಎನ್., ಎನ್ಎಸ್ಎಸ್ , ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ವೈ.ಬಿ.ನಾಯಕ, ಪ್ರೊ.ಜಯರಾಮರೆಡ್ಡಿ, ಪ್ರೊ.ಎಂ.ಕೆ.ಯಾಧವ, ಪ್ರೊ.ಪಿ.ಎಸ್.ಹೊರಕೇರಿ, ಪ್ರೊ.ಆರ್.ಎನ್.ರಾಠೋಡ, ಬೋಧಕೇತರ ಸಿಬ್ಬಂದಿ, ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

