ಇಂಡಿ: ಬಾಲಕಾರ್ಮಿಕ ಪದ್ಧತಿ ಜಗತ್ತಿನ ಪಿಡುಗು. ಮಕ್ಕಳನ್ನು ದುಡಿಸುವ ಪದ್ಧತಿ ರಾಷ್ಟ್ರಕ್ಕೆ ಕಳಂಕವಾಗಿದ್ದು, ಮಕ್ಕಳ ದುಡಿಮೆ ಮಾನವ ಅಭಿವೃದ್ಧಿಗೆ ಮಾರಕವಾಗಿದೆ. ಮಕ್ಕಳ
ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ, ಈ ಪದ್ಧತಿಯ ಕಡಿವಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ನಿಮಿತ್ತ ‘ಮಕ್ಕಳ ಶೈಕ್ಷಣಿಕ ಸವಲತ್ತುಗಳು’ಕುರಿತು ಮಾತನಾಡಿದರು.
ಶಿಕ್ಷಣದಿಂದ ಬದುಕು ಕಟ್ಟಿಕೊಂಡು, ಪ್ರಗತಿ ಹೊಂದಲು ಸಾಧ್ಯ ಎಂಬ ಅರಿವು ಪೊಷಕರಲ್ಲಿ ಮೂಡಿಸಬೇಕು. ಬಾಲಕಾರ್ಮಿಕ ಪದ್ಧತಿ ವಿರುದ್ಧದ ನಿಜವಾದ ಅಸ್ತ್ರ ಎಂದರೆ ಸಾರ್ವತ್ರಿಕ ಶಿಕ್ಷಣ. ಪೋಷಕರು ಮಕ್ಕಳನ್ನು ಬಾಲ ಕಾರ್ಮಿಕರನ್ನಾಗಿಸದೆ ಅವರ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಹಿರಿಯ ಶಿಕ್ಷಕ ಎಸ್ ಎಸ್ ಅರಬ ಮಾತನಾಡಿ, ಬಾಲ್ಯವು ಸಂತೋಷ, ನಗು ಮತ್ತು ಶಿಕ್ಷಣದ ಸಮಯವಾಗಿರಬೇಕು. ಬಾಲ್ಯಾವಸ್ಥೆಯಲ್ಲಿ ಮಕ್ಕಳನ್ನು ಮೂಲಭೂತ ಶಿಕ್ಷಣ, ಜ್ಞಾನ ಮತ್ತು ಕಲಿಕೆಯ ಪ್ರಕ್ರಿಯೆಯಲ್ಲಿ ತೊಡಗಿಸಬೇಕು. ಅವರ ಹಕ್ಕುಗಳನ್ನು ರಕ್ಷಿಸಬೇಕಾದದ್ದು ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕರ ಕರ್ತವ್ಯ ಎಂದು ಹೇಳಿದರು.
ಶಿಕ್ಷಕಿ ಎನ್ ಬಿ ಚೌಧರಿ ಬಾಲ ಕಾರ್ಮಿಕ ವಿರೋಧಿ ದಿನದ ಪ್ರತಿಜ್ಞಾ ವಿಧಿ ಬೋಧಿಸಿದರು. ಶಿಕ್ಷಕಿ ಎಸ್ ಪಿ ಪೂಜಾರಿ, ಮಕ್ಕಳು, ಪಾಲಕರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
ಜಗತ್ತಿನ ಪಿಡುಗು ಬಾಲಕಾರ್ಮಿಕ ಪದ್ಧತಿಗೆ ಕಡಿವಾಣ ಹಾಕಿ :ಬಂಡೆ
Related Posts
Add A Comment

