ದೇವರಹಿಪ್ಪರಗಿ: ವಾಹನಗಳು ಹಾಗೂ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡತಡೆಯಾದ ಗೂಡಂಗಡಿ, ಬೀದಿಬದಿಯ ತಳ್ಳುವ ಗಾಡಿಗಳು, ಅತಿಕ್ರಮಣಗೊಂಡ ಕಟ್ಟಡಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ತಹಶೀಲ್ದಾರ ಪ್ರಕಾಶ ಸಿಂದಗಿ ಹೇಳಿದರು.
ಪಟ್ಟಣದಲ್ಲಿ ಗುರುವಾರ ಮೊಹರೆ ಹಣಮಂತ್ರಾಯ ವೃತ್ತ , ಬಸ್ ನಿಲ್ದಾಣ ಆವರಣ ಸೇರಿದಂತೆ ನಾಡಕಚೇರಿವರೆಗಿನ ರಸ್ತೆಯಲ್ಲಿನ ಗೂಡಂಗಡಿ, ಬೀದಿಬದಿಯ ತಳ್ಳುವ ಗಾಡಿಗಳನ್ನು ತೆರವುಗೊಳಿಸಿ ಮಾತನಾಡಿದರು. ಪಟ್ಟಣ ಪಂಚಾಯಿತಿಯಲ್ಲಿ ಕಳೆದ ೩ ದಿನಗಳ ಹಿಂದೆ ಜರುಗಿದ ಸಾರ್ವಜನಿಕ ಸಭೆಯ ಮೂಲಕ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ರಸ್ತೆ ಅಗಲೀಕರಣದ ನಿರ್ಧಾರ ಮಾಡಲಾಗಿದೆ. ಅದಕ್ಕಾಗಿ ಗುರುವಾರ ನಾಡಕಚೇರಿವರೆಗೆ, ಶುಕ್ರವಾರ ಅಂಬೇಡ್ಕರ್ ವೃತ್ತ, ಟಿಪ್ಪು ಸುಲ್ತಾನ ವೃತ್ತ, ಮೇನ್ ಬಜಾರಗಳಲ್ಲಿ ಕಾರ್ಯಾಚರಣೆ ಕೈಗೊಂಡು ಅತೀಕ್ರಮಣಗೊಂಡ ಕಟ್ಟಡಗಳು ಸೇರಿದಂತೆ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾದ ಮಳಿಗೆಗಳನ್ನು ತೆರವುಗೊಳಿಸಿ ಜನತೆಗೆ ಅನುಕೂಲ ಮಾಡಿಕೊಡಲಾಗುತ್ತಿದೆ ಎಂದರು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಲ್.ಡಿ.ಮುಲ್ಲಾ ಮಾತನಾಡಿ, ವಿಶಾಲವಾದ ರಸ್ತೆಗಳಿಂದ ಅಪಘಾತಗಳು ನಿಯಂತ್ರಿಸಲ್ಪಡುತ್ತವೆ. ಹಾಗೂ ಪಟ್ಟಣವು ಸುಂದರವಾಗಿ ಕಾಣುತ್ತದೆ. ಆದ್ದರಿಂದ ಈ ಕಾರ್ಯಾಚರಣೆಗೆ ಎಲ್ಲರೂ ಸಹಕರಿಸಬೇಕು ಎಂದರು.
ಪಿಎಸ್‌ಐ ಬಸವರಾಜ ತಿಪ್ಪಾರಡ್ಡಿ, ಹೆಸ್ಕಾಂ ಶಾಖಾಧಿಕಾರಿ ಯು.ಎಲ್.ಪಟ್ಟಣ, ಕಿರಿಯ ಆರೋಗ್ಯ ನಿರೀಕ್ಷಕ ಫಿರೋಜ್ ಮುಲ್ಲಾ ಸೇರಿದಂತೆ ಪೊಲೀಸ್ ಸಿಬ್ಬಂದಿ, ಪೌರಕಾರ್ಮಿಕರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

