ಸಿಂದಗಿ: ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಪಂ ಇಒ ರಾಮು ಅಗ್ನಿ ಅವರ ನೇತೃತ್ವದಲ್ಲಿ ಗುರುವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ತಾಲೂಕಿನಲ್ಲಿ ಈ ಬಾರಿ ಪರೀಕ್ಷೆಗೆ ಹಾಜರಾದ ಮಕ್ಕಳಲ್ಲಿ ಪ್ರತಿಶತ ಶೇ.೮೦ ವಿದ್ಯಾರ್ಥಿಗಳು ಮಾತ್ರ ತೇರ್ಗಡೆ ಹೊಂದಿದ್ದು, ಮುಂದಿನ ದಿನಗಳಲ್ಲಿ ಶೇ.೧೦೦ಕ್ಕೆ ೧೦೦ರಷ್ಟು ಫಲಿತಾಂಶ ಬರುವಂತೆ ಶ್ರಮ ವಹಿಸಬೇಕು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ತಾಪಂ ಇಒ ರಾಮು ಅಗ್ನಿ ಸೂಚಿಸಿದರು.
ಇದಕ್ಕೆ ಉತ್ತರಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಆರಿಫ್ ಬಿರಾದಾರ್, ಈಗಾಗಲೇ ತಾಲೂಕಿನ ಪ್ರತಿಯೊಂದು ಗ್ರಾಮದ ಸರಕಾರಿ ಶಾಲೆಗೆ ತಮ್ಮ ಮಕ್ಕಳಿಗೆ ನೋಂದಣಿ ಪಡೆದುಕೊಳ್ಳುವಂತೆ ಜಾಗೃತಿ ಮೂಡಿಸಲಾಗಿದೆ. ಶೈಕ್ಷಣಿಕ ವರ್ಷದಲ್ಲಿ ಗಣಿತ, ವಿಜ್ಞಾನ ಮತ್ತು ಇಂಗ್ಲಿಷ್ ವಿಷಯಗಳಿಗೆ ಹೆಚ್ಚಿನ ಆದ್ಯತೆ ನೀಡಿ ವಿಶೇಷ ತರಗತಿ ನಡೆಸಲಾಗುವದು. ಮುಂಬರುವ ದಿನಮಾನಗಳಲ್ಲಿ ೧೦೦ಕ್ಕೆ ೧೦೦ರಷ್ಟು ಫಲಿತಾಂಶ ಬರುವ ಹಾಗೆ ಮಾಡಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಇಲಾಖೆ, ಆರೋಗ್ಯ ಇಲಾಖೆ, ಪಿ.ಆರ್.ಇ.ಡಿ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ, ವಲಯ ಅರಣ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಪ್ರಸ್ತುವ ವರ್ಷದಲ್ಲಿ ಯಾರಿಗೂ ಏನು ಸಮಸ್ಯೆಗಳಾಗಾದಂತೆ ನಿಗಾ ವಹಿಸಬೇಕು. ಆಯಾ ಇಲಾಖೆಯ ಜವಾಬ್ದಾರಿಗಳನ್ನು ನಿಭಾಯಿಸುವಲ್ಲಿ ಶ್ರಮಿಸಿ.
ಪ್ರಸ್ತುತ ಮಳೆ ಹೆಚ್ಚಾಗಿರುವುದರಿಂದ ಸಾರ್ವಜನಿಕರಿಗೆ ರೋಗ ರುಜಿನಗಳು ಹೆಚ್ಚಾಗುವ ಸಾಧ್ಯತೆಯಿದೆ. ಹಾಗಾಗಿ ಆರೋಗ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಅರಿವು ಮೂಡಿಸಬೇಕು. ಆಶಾ ಕಾರ್ಯಕರ್ತರು ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾರ್ಯನಿರ್ವಹಿಸುವಂತೆ ತಿಳಿಸಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಆಸ್ಪಕ್ ದುರ್ಗದ, ನರೇಗಾ ಸಹಾಯಕ ನಿರ್ದೇಶಕ ನಿತ್ಯಾನಂದ ಯಲಗೋಡ, ಅರಣ್ಯ ವಲಯಾಧಿಕಾರಿ ರಾಜೀವ ಬಿರಾದಾರ, ಎಮ್.ವಾಯ್ ಮಲಕಣ್ಣವರ, ಸಿಡಿಪಿಒ ಶಂಭುಲಿಂಗ ಹಿರೇಮಠ್, ಆರೋಗ್ಯ ಇಲಾಖೆ ಸಿಬ್ಬಂದಿ ಪಿ.ವಾಯ್ ಚೌಡಕಿ, ಕೃಷಿ ಇಲಾಖೆ ವ್ಯವಸ್ಥಾಪಕರು ಶಿವಣ್ಣ ಗೊಂಗಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

