ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಜಯಪುರ ಜಿಲ್ಲಾ ಪ್ರವಾಸ
ವಿಜಯಪುರ: ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜೂ.೧೬ ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಜೂ.೧೬ರಂದು ಬೆಳಿಗ್ಗೆ ೧೦ ಗಂಟೆಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಪ್ರಯಾಣ ಬೆಳೆಸಿ, ೧೦-೫೦ಕ್ಕೆ ಬಳ್ಳಾರಿ ಜಿಲ್ಲೆ ತೋರಣಗಲ್ಲು ಏರಸ್ಟ್ರಿಪ್‌ಗೆ ಆಗಮಿಸಿ ೧೦-೫೫ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಹೊರಟು ಮಧ್ಯಾಹ್ನ ೧೨-೧೦ಕ್ಕೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಗ್ರಾಮದ ಹೆಲಿಪ್ಯಾಡ್‌ಗೆ ಆಗಮಿಸಿ, ಇಂಚಗೇರಿ ಮಠದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪುಷ್ಪಾರ್ಚನೆ ಕಾರ್ಯಕ್ರಮ ಹಾಗೂ ನಿಜರಾಜಯೋಗಿ ಶ್ರೀ ಸಮರ್ಥ ಸದ್ಗುರು ಶ್ರೀ ಮಾಧವಾನಂದ ಪ್ರಭುಗಳ ದೇವಸ್ಥಾನ ಲೋಕಾರ್ಪಣೆ, ಕಳಸಾರೋಹಣ ಮತ್ತು ೪೪ನೇ ಪುಣ್ಯತಿಥಿ ಸಪ್ತಾಹದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ ೩ ಗಂಟೆಗೆ ಇಂಚಗೇರಿ ಹೆಲಿಪ್ಯಾಡ್‌ದಿಂದ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

