ವಿಜಯಪುರ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ಅವರು ಜೂ.೧೯ರಿಂದ ೨೧ರವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಜೂ.೧೯ರಂದು ಬೆಳಿಗ್ಗೆ ೬ಗಂಟೆಗೆ ವಿಜಯಪುರಕ್ಕೆ ಆಗಮಿಸಿ, ಅಂದು ಬೆಳಿಗ್ಗೆ ೮ ರಿಂದ ರಾತ್ರಿ ೮ ಗಂಟೆಯವರೆಗೆ ವಸತಿ ಶಾಲೆ, ವಸತಿ ನಿಲಯ, ಜಿಲ್ಲಾ ಆಸ್ಪತ್ರೆ ಅಂಗನವಾಡಿ, ಮಕ್ಕಳ ಪಾಲನಾ ಸಂಸ್ಥೆ ಹಾಗೂ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಜೂ.೨೦ರಂದು ಬೆಳಿಗ್ಗೆ ೧೦-೩೦ ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಮಕ್ಕಳ ರಕ್ಷಣಾ ವ್ಯವಸ್ಥೆ ಕುರಿತು ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ ೬ ಗಂಟೆಗೆ ವಿಜಯಪುರದಿಂದ ಸಿಂದಗಿಗೆ ಪ್ರಯಾಣ ಬೆಳೆಸಿ, ರಾತ್ರಿ ೮ ಗಂಟೆಗೆ ಸಿಂದಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪರಿಶೀಲನೆ ನಡೆಸಿ, ಮಕ್ಕಳೊಂದಿಗೆ ಊಟ ಮತ್ತು ವಾಸ್ತವ್ಯ ಮಾಡಲಿದ್ದಾರೆ.
ಜೂ.೨೧ರಂದು ಬೆಳಿಗ್ಗೆ ೬ ಗಂಟೆಗೆ ಮಕ್ಕಳೊಂದಿಗೆ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೆಳಿಗ್ಗೆ ೮ ಗಂಟೆಗೆ ಸಿಂದಗಿಯಿಂದ ಬೀದರ್ ಜಿಲ್ಲೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
