ಎಸ್ಸೆಸ್ಸೆಲ್ಸಿ ಪರೀಕ್ಷೆ -೨ ೫೨೬ ವಿದ್ಯಾರ್ಥಿಗಳ ಗೈರು
ವಿಜಯಪುರ: ಶುಕ್ರವಾರ ನಡೆದ ಎಸ್ಸೆಸೆಲ್ಸಿ ಪರೀಕ್ಷೆ -೨ರ ಪ್ರಥಮ ಭಾಷೆ ವಿಷಯದಲ್ಲಿ ಜಿಲ್ಲೆಯ ಒಟ್ಟು ೪,೭೭೭ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು. ಇದರಲ್ಲಿ ೪,೨೫೧ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ೫೨೬ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
