ದೇವರ ಹಿಪ್ಪರಗಿ: ಕಳೆದ ಹಲವಾರು ದಿನಗಳಿಂದ ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸಮರ್ಪಕವಾಗಿ ಪೂರೈಸಲು ಅಗತ್ಯ ದಾಸ್ತಾನು ಕ್ರಮ ಕೈಗೊಳ್ಳಬೇಕು ಎಂದು ಹುಣಶ್ಯಾಳ ಗ್ರಾಪಂ ಮಾಜಿ ಅಧ್ಯಕ್ಷೆ ಬಂಗಾರೇಮ್ಮ ಮಾನಪ್ಪ ದೊಡಮನಿ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿ, ಆಗ್ರಹಿಸಿದ್ದಾರೆ.
ಮನವಿ ಸಲ್ಲಿಸಿ ಮಾತನಾಡಿ, ಯಾವುದೇ ಕಾರಣಕ್ಕೂ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಕೊರತೆ ಉಂಟಾಗದಂತೆ ತಾಲೂಕು ಕೃಷಿ ಅಧಿಕಾರಿಗಳು ಹಾಗೂ ತಾಲೂಕು ಆಡಳಿತ ಕ್ರಮ ಕೈಗೊಳ್ಳಬೇಕು, ಅಗತ್ಯ ಪ್ರಮಾಣದಲ್ಲಿ ದಾಸ್ತಾನು ಸಂಗ್ರಹಿಸುವ ಕಾರ್ಯವಾಗಬೇಕು, ತಾಲೂಕಿನ ಕೊನೆಯ ಭಾಗದ ರೈತರಿಗೂ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದರು.
ಬೀಜ ರಸಗೊಬ್ಬರಗಳಿಗೆ ಸರ್ಕಾರ ನಿಗದಿ ಮಾಡಿದ ದರಕ್ಕಿಂತ ಹೆಚ್ಚಿನ ಹಣವನ್ನು ರೈತರಿಂದ ವಸೂಲಾತಿ ಮಾಡುತ್ತಿರುವುದು ಕಂಡು ಬಂದರೆ ಅಂತಹ ಅಧಿಕಾರಿ, ಸಿಬ್ಬಂದಿ ಹಾಗೂ ಮಧ್ಯವರ್ತಿಗಳ ವಿರುದ್ಧ ಹಾಗೂ ನಕಲಿ ಬೀಜ ಹಾಗೂ ರಸಗೊಬ್ಬರಗಳ ಮಾರಾಟ ಮಾಡುವವರ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು.
ರೆಂಟೆ ಸಮಗೊಳಿಸುವ, ಬಿತ್ತನೆಗೆ ಅನುಕೂಲವಾಗುವಂತಹ ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಲಭ್ಯತೆಯ ಕುರಿತು ಪ್ರಸಾರ ಪಡಿಸಿ ಸಬ್ಸಿಡಿ ದರದಲ್ಲಿ ಹೆಚ್ಚು ರೈತರಿಗೆ ತಲುಪಿಸಲು ಅನುಕೂಲವಾಗುವಂತೆ ಕೃಷಿ ಇಲಾಖೆ ಅಧಿಕಾರಿಗಳು ಗಮನವಹಿಸಬೇಕು.
ಸರಕಾರದ ಮಾರ್ಗ ಸೂಚಿಯಂತೆ ರಸಗೊಬ್ಬರದ ಮಳಿಗೆಗಳಲ್ಲಿ ದಾಸ್ತಾನು ದರಪಟ್ಟಿ ಹಾಕಿದಿರುವುದು, ಬೀಜ, ರಸಗೊಬ್ಬರಗಳು ಖರೀದಿಸಿದರೆ, ಬೇರೆ ಗೊಬ್ಬರಗಳು ಕಡ್ಡಾಯವಾಗಿ ಖರೀದಿಸಬೇಕು ಎನ್ನುವವರ ಹಾಗೂ ರಸೀದಿ ಕೊಡದಿರುವುದರ ಕುರಿತು ಇದೆಲ್ಲಕ್ಕೂ ಕೃಷಿ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

