ನೀಟ್ ಪರೀಕ್ಷೆ ಅವ್ಯವಹಾರ ಕುರಿತು ನ್ಯಾಯಾಂಗ ತನಿಖೆಗೆ ದವಿಪ ಆಗ್ರಹ
ವಿಜಯಪುರ: ನಗರದಲ್ಲಿರುವ ಗಾಂಧಿ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ರ್‍ಯಾಲಿ ಮೂಲಕ ನೀಟ್ ಪ್ರವೇಶ ಪರೀಕ್ಷೆಯಲ್ಲಿ ನಡೆದ ಭ್ರಷ್ಟಾಚಾರವನ್ನು ವಿರೋಧಿಸಿ ದಲಿತ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳ ಮೂಲಕ ಜಿಲ್ಲಾ ಅಧಿಕಾರಿಗಳಿಗೆ ಮನವಿ ಮಾಡಿದರು.
ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಅಕ್ಷಯ್ ಕುಮಾರ್ ಮಾತನಾಡಿ, ಜೂನ್ ೪ ರಂದು ಪ್ರಕಟಗೋಂಡ ನೀಟ್ ಪರೀಕ್ಷೆ ಫಲಿತಾಂಶದ ಭ್ರಷ್ಟಾಚಾರದ ಪಾರದರ್ಶಕತೆಯ ಕುರಿತು ದೇಶವ್ಯಾಪ್ತಿ ವಿದ್ಯಾರ್ಥಿಗಳು ಹಾಗೂ ಪಾಲಕರು ಹಲವಾರು ಪ್ರಶ್ನೆಗಳನ್ನು ಎತ್ತಿದ್ದಾರೆ. ಯು.ಜಿ.ಸಿ. ಪರೀಕ್ಷಾ ಮಾರ್ಗಸೂಚಿ ಅನ್ವಯ ಅಂಕಗಳನ್ನು ನೀಡಿದ್ದಲ್ಲಿ ವಿದ್ಯಾರ್ಥಿಗಳು ಪಡೆಯಬಹುದಾದ ಅಂಕಗಳೊಂದಿಗೆ ಪ್ರಸ್ತುತ ಒಂದಿಷ್ಟು ವಿದ್ಯಾರ್ಥಿಗಳು ಪಡೆದಿರುವ ಅಂಕಗಳು ಹೊಂದಾಣಿಕೆ ಆಗುತ್ತಿಲ್ಲ.
ಕೆಲವು ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅಂಕ ನೀಡಿರುಹುದಾಗಿ ಎನ್.ಟಿ.ಎ ಸಮಾಜಿಸಿ ನೀಡಿದೆ. ಆದರೆ ಹೆಚ್ಚುವರಿ ಶುಲ್ಕಗಳನ್ನು ನೀಡಿರುವ ಮಾನದಂಡವು ಸಂಪೂರ್ಣವಾಗಿ ಪಕ್ಷಪಾತಿಯಾಗಿದೆ. ಈ ವರ್ಷ ಪ್ರಕತಿಸಲಾಗಿದ್ದ ಮಾರ್ಗಸುಚಿ ಅನ್ವಯ ಹೆಚ್ಚುವರಿ ಅಂಕಗಳನ್ನು ನೀಡಲು ಅವಕಾಶವಿಲ್ಲ ಆಚರ್ಯಕರವೇಂಬಂತೆ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸಮಾನ ಅಂಕಗಳಿಸಿದ್ದಾರೆ.
ಈ ಮುಂಚೆ ರಾಜ್ಯ ಮಟ್ಟದಲ್ಲಿ ಜಂಟಿ ಪ್ರವೇಶ ಪರೀಕ್ಷೆಗಳು ಜಾರಿಯಲ್ಲಿದ್ದಾಗ ಭ್ರಷ್ಟಾಚಾರದ ಕಾರಣವೊಡ್ಡಿಯೆ ಅಖಿಲ ಭಾರತ ಮಟ್ಟದ ನೀಟ್ ಪರೀಕ್ಷೆಯನ್ನು ಪ್ರಾರಂಭಿಸಲಾಯಿತು. ಭ್ರಷ್ಟಾಚಾರದ ಕುರಿತು ತನಿಖೆ ನಡೆಸಿ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ವಿಧಿಸುವುದರ ಜೊತೆಗೆ ಪರೀಕ್ಷಾ ಪದ್ದತಿಯನ್ನು ಬದಲಾಯಿಸುವುದು ಪರಿಹಾರವಲ್ಲ. ಸರ್ಕಾರದ ನಿಷ್ಕಾಳಜಿ ಮತ್ತು ಪರೀಕ್ಷಾ ವ್ಯವಸ್ಥೆಯ ಸಂಪೂರ್ಣ ವ್ಯಾಪಾರಿಕರಣದಿಂದಾಗಿ ಇಡೀ ವೈದ್ಯಕಿಯ ಪರೀಕ್ಷೆಯು ಕಲುಷಿತಕ್ಕೊಳಗಾಗುತ್ತಿದೆ ಮತ್ತು ಅಮಾಯಕ ವಿದ್ಯಾರ್ಥಿಗಳು ಇದರ ಭಲಿಪಶುಆಗಿದ್ದಾರೆ ಈ ಹಿನ್ನಲೆಯಲ್ಲಿ ಒಟ್ಟು ಪ್ರಕರಣದ ಕೂರಿತು ನ್ಯಾಯಾಂಗ ತನಿಕೆ ನಡೆಸಬೇಕು ಮತ್ತು ಇದರಲ್ಲಿ ಭಾಗಿಯಾದ ಎಲ್ಲಾವ್ಯಕ್ತಿಗಳಿಗು ಕಠಿಣಶಿಕ್ಷೆ ವಿಧಿಸಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಸರ್ಕಾವನ್ನು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರದಾನ ಮನವಿ ಮಾದಲಾಯಿತು.
ಈ ಸಂದರ್ಭದಲ್ಲಿ ದಲಿತ ವಿಧ್ಯಾರ್ಥಿ ಪರಿಷತ್ ಮುಖಂಡರಾದ ಮಾದೇಶ, ಯುವರಾಜ್, ಯಾಶಿನ್, ಪ್ರಜ್ವಲ್, ಗೌಡಪ್ಪ ಗೌಡಾ, ಸಂದೇಶ, ಸೇರಿದಂತೆ ಅನೇಕ ವಿಧ್ಯಾರ್ಥಿಗಳು ಭಾಗಿಯಾಗಿದ್ದರು.

