ಸಿಂದಗಿ: ರಾಜ್ಯ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಿರುವುದು ಜನ ಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಿದೆ. ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿರುವುದನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ಡಿವೈಎಫ್‌ಐ ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ ಮತ್ತು ಕೂಡಲೇ ಬೆಲೆ ಏರಿಕೆಯನ್ನು ಹಿಂಪಡೆಯಬೇಕೆಂದು ರಾಜ್ಯ ಸರಕಾರವನ್ನು ಒತ್ತಾಯಿಸುತ್ತದೆ ಎಂದು ಕರ್ನಾಟಕ ರಾಜ್ಯ ಸಮಿತಿ ಸದಸ್ಯ ರಮೇಶ ಸಾಸಾಬಾಳ ಹೇಳಿದ್ದಾರೆ.
ಭಾನುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕ ಸರಕಾರವು ಪೆಟ್ರೋಲ್ ಮತ್ತು ಡೀಜೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿರುವುದರಿಂದಾಗಿ ಪೆಟ್ರೋಲ್ ಬೆಲೆ ೩ರೂ, ಡೀಸೆಲ್ ಬೆಲೆ೩.೫೦ ಪೈಸೆ ಹೆಚ್ಚಳವಾಗಿದೆ. ೮೫.೯೩ ಪೈಸೆಯಿದ್ದ ಡೀಸೆಲ್ ಬೆಲೆ ೮೯.೨೦ ಪೈಸೆಗೆ ಏರಿಕೆಯಾದರೆ ೧೦೦ ರೂಪಾಯಿ ಇದ್ದ ಪೆಟ್ರೋಲ್ ದರ ೧೦೩ ರೂ.ಗೆ ಹೆಚ್ಚಳವಾಗಿದೆ ಇದರಿಂದ ಸಾರ್ವಜನಿಕರಿಗೆ ಹೊರೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪೆಟ್ರೋಲ್, ಡಿಸೇಲ್ ಬೆಲೆಗಳು ದೈನಂದಿನ ಬದುಕಿಗೆ ಜನಸಾಮಾನ್ಯರು ಬಳಸುವ ಅಗತ್ಯ ಸರಕುಗಳ ಮೇಲೆಯೂ ಪರಿಣಾಮ ಬೀರುತ್ತವೆ. ಕಳೆದ ವರ್ಷ ಬರಗಾಲ ಬಿದ್ದಿರುವುದರಿಂದಾಗಿ ಗ್ರಾಮೀಣ ಪ್ರದೇಶದ ಜನತೆ ಸಂಕಷ್ಠವನ್ನು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರಕಾರ ತನ್ನ ಆದಾಯ ಹೆಚ್ಚಿಸಿಕೊಳ್ಳಲು ತೈಲ ಬೆಲೆ ಏರಿಸಿರುವುದು ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ. ಪೆಟ್ರೋಲ್-ಡೀಸೆಲ್ ಮೇಲಿನ ಮಾರಾಟ ತೆರಿಗೆ ಏರಿಕೆಯನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ತೀವ್ರ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ ಎಂದು ಡಿವೈಎಫ್ಐ ರಾಜ್ಯ ಸಮಿತಿಯು ಒತ್ತಾಯಿಸುತ್ತದೆ ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡುತ್ತೇವೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

