ಝಳಕಿ: ಗ್ರಾಮೀಣ ಭಾಗದ ಜನರು ಬಡತನದಿಂದ ನಿರಾಶ್ರಿತರಾಗಿರುತ್ತಾರೆ ಈ ಉದೇಶದಿಂದ ಗ್ರಾಮೀಣ ಭಾಗದ ಬಡ ಜನರ ಸೇವೆ ಮಾಡಲು ಡಾ.ಎಲ್.ಎಚ್ ಬಿದರಿ ಅವರು ಮುಂದಾಗಿದ್ದಾರೆ ಆದರಿಂದ ಎಲ್ಲ ಜನರು ಇದರ ಸದುಪಯೋಗ ಪಡಿಸಿಕೊಳ್ಳಿ ಎಂದು ಯುವ ಮುಖಂಡ ರಾಘವೇಂದ್ರ ಕಾಪಸೆ ಹೇಳಿದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ವಿಜಯಪುರ ಡಾ.ಬಿದರಿಯವರ ಅಶ್ವಿನಿ ಆಸ್ಪತ್ರೆ ಹಾಗೂ ನ್ಯೂ ಅಶ್ವಿನಿ ಇನ್ಸ್ಟಿಟ್ಯೂಟ್ ಆಪ್ ನರ್ಸಿಂಗ್ ಸೈನ್ಸಸ್,ಝಳಕಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದೊಂದಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಹೃದಯ ತಪಾಸಣೆ ಹಾಗೂ ರಕ್ತದಾನ ಶಿಬಿರದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ದಾನಗಳಲ್ಲಿ ರಕ್ತದಾನ ಮಹಾದಾನ ಜನರ ಜೀವ ರಕ್ಷಣೆಗೆ ರಕ್ತ ಅತ್ಯವಶ್ಯಕವಾಗಿದ್ದು, ರಕ್ತದ ಅವಶ್ಯಕತೆ ಇರುವ ವ್ಯಕ್ತಿಗಳಿಗೆ ರಕ್ತದಾನ ಮಾಡುವುದರ ಮೂಲಕ ಎಲ್ಲರೂ ಜನರ ಅಮೂಲ್ಯವಾದ ಜೀವ ರಕ್ಷಣೆಗೆ ಮುಂದಾಗಬೇಕು ಎಂದರು.
ಡಾ.ಎಲ್.ಎಚ್.ಬಿದರಿ ಮಾತನಾಡಿ, ಮಾನವನಿಗೆ ಆಕಸ್ಮಿಕ ಸಂದರ್ಭಗಳಲ್ಲಿ ತುರ್ತಾಗಿ ಅಗತ್ಯವಾಗಿ ಬೇಕಾಗುವ ರಕ್ತವು ಅಮೂಲ್ಯ ಜೀವ ಉಳಿಸುವ ವಸ್ತುವಾಗಿದೆ. ಇದನ್ನರಿತು ಸಮಾಜದ ಪ್ರತಿಯೊಬ್ಬ ಆರೋಗ್ಯವಂತರು ರಕ್ತದಾನ ಮಾಡುವ ಮೂಲಕ ಮಾದರಿಯಾಗಬೇಕು. ರಕ್ತದಾನಮಾಡಿದರೆ ತಮ್ಮ ದೇಹದ ಕೊಬ್ಬಿನಾಂಶ ಕಡಿಮೆಯಾಗಿ ಹೊಸ ರಕ್ತ ಉತ್ಪತ್ತಿಯಾಗಲಿದೆ ಎಂದರು.
ಗ್ರಾಪಂ.ಮಾಜಿ ಅಧ್ಯಕ್ಷ ಸಣ್ಣಪ್ಪ ತಳವಾರ, ಅಣ್ಣಪ್ಪ ತಳವಾರ,ನಾರಾಯಣ ಜಾಹಾಗೀರದಾರ, ಕಾಲೇಜ ಪ್ರಾಂಶುಪಾಲ ಕಬ್ಬಾಡೆ ಸೇರಿದಂತೆ ನೂರಾರು ಜನರು ಭಾಗಿಯಾಗಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

