Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ

ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಭಾರತೀಯ ಜನತಾ ಪಾರ್ಟಿ ವಿಜಯಪುರ ಜಿಲ್ಲಾ ಘಟಕದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಹೇರಿದ್ದು ಖಂಡಸಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಗಾಂಧಿವೃತ್ತದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೂ ಬೈಕ್‌ಗೆ ಹಗ್ಗಕಟ್ಟಿ ಎಳೆದುಕೊಂಡು ಬರುವುದ ಮೂಲಕ ವಿನೂತನ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಓಬಿಸಿ ಮೋರ್ಚಾ ಉಪಾಧ್ಯಕ್ಷ ವಿವೇಕಾನಂದ ಡಬ್ಬಿ ಮಾತನಾಡಿ, ಕರ್ನಾಟಕ ರಾಜ್ಯ ಇತಿಹಾಸದಲ್ಲಿ ಇಂದಿನ ಕಾಂಗ್ರೆಸ್ ಸರ್ಕಾರದಷ್ಟು ಜನವಿರೋಧಿ ಎಂದು ಕಂಡಿಲ್ಲ. ಸುಳ್ಳು ಭರವಸೆ ಹಾಗೂ ಯೋಜನೆಗಳನ್ನು ಪೂರೈಸಲಾಗದೇ ರಾಜ್ಯದ ಖಜಾನೆಯನ್ನು ಬರಿದು ಮಾಡಿಕೊಂಡಿರುವ ಈ ಸರ್ಕಾರ ಜನಕಲ್ಯಾಣವನ್ನು ಮರೆತು ಭ್ರಷ್ಟಾಚಾರದಲ್ಲಿ ತೊಡಗಿ ರಾಜ್ಯದ ಜನತೆಯನ್ನು ಸಂಕಷ್ಟಕ್ಕೆ ತಳ್ಳುತ್ತಿದೆ. ಕೂಡಲೇ ಪೆಟ್ರೋಲ್ ಡಿಸೇಲ್ ಏರಿಕೆಯನ್ನು ಕಡಿತಗೊಳಿಸಿ ಈ ನಿರ್ಧಾರವನ್ನು ಹಿಂಪಡೆಯಬೇಕು.
ಈ ಸಂದರ್ಭದಲ್ಲಿ ದೇವರ ಹಿಪ್ಪರಗಿ ಮತಕ್ಷೇತ್ರದ ಮಾಜಿ ಶಾಸಕರಾದ ಸೋಮನಗೌಡ ಪಾಟೀಲ ಸಾಸನೂರ ಮಾತನಾಡಿ, ರಾಜ್ಯದ ಜನತೆಗೆ ನೆಮ್ಮದಿಯ ಬದುಕು ನೀಡಲು ಸಾಧ್ಯವಿಲ್ಲದಿದ್ದರೆ, ಈ ಸರ್ಕಾರ ಅಧಿಖಾರ ಬಿಟ್ಟು ತೊಲಗಲಿ, ಅಗತ್ಯ ವಸ್ತುಗಳ ಬೆಲೆಗಳಣ್ನು ಏರಿಸುವ ಮೂಲಕ ನಾವು ಸರ್ಕಾರ ನಡೆಸುತ್ತೇವೆ ಎಂದು ಹೊರಟಿರುವ ಕಾಂಗ್ರೆಸ್ಸಿಗರು ಜನರ ಬದುಕಿನೊಂದಿಗೆ ಚೆಲ್ಲಾಟವಾಡಲು ಹೊರಟಿದ್ದಾರೆ. ಇದನ್ನು ನೋಡಿಕೊಂಡು ಭಾರತೀಯ ಜನತಾ ಪಾರ್ಟಿ, ಕೈಕಟ್ಟಿ ಕೂರಲು ಸಾಧ್ಯವಿಲ್ಲ, ನಿಮ್ಮ ರೈತ ವಿರೋಧಿ, ಜನ ವಿರೋಧಿ, ಬಡವರ ವಿರೋಧಿ ಹಾಗೂ ಮಧ್ಯಮ ವರ್ಗಗಳ ವಿರೋಧಿ ಆಡಳಿತ ಕೊನೆಯಾಗುವ ವರೆಗೆ ನಾವೂ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ವಿಜಯಕುಮಾರ ಪಾಟೀಲ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಭಿವೃದ್ಧಿ ಕೆಲಸ ಆಗಿಲ್ಲ. ಡೀಸೆಲ್ ದರ ಏರಿಕೆಯ ಹಿನ್ನೆಲೆಯಲ್ಲಿ ಕೇವಲ ವಾಹನ ಸವಾರರಿಗೆ ಮಾತ್ರ ಹೊರೆಯಾಗುವುದಿಲ್ಲ, ಇದು ಸರಕು ಸಾಗಾಣಿಕೆಯ ಮೇಲೆ ಪರಿಣಾಮ ಬೀರಲಿದೆ, ಪ್ರಯಾಣದ ದರವನ್ನು ಹೆಚ್ಚಿಸಲಿದೆ, ತನ್ಮೂಲಕ ತರಕಾರಿಗಳ ಬೆಲೆ, ದಿನನಿತ್ಯ ಗೃಹಬಳಕೆ ವಸ್ತುಗಳ ಬೆಲೆ, ದವಸ ಧಾನ್ಯಗಳ ಬೆಲೆ, ಕಟ್ಟಡ ಸಾಮಗ್ರಿಗಳ ಬೆಲೆ ಹೆಚ್ಚಾಗಲಿದೆ, ಇದು ಇಡೀ ಕರುನಾಡ ಜನರನ್ನು ಸಂಕಷ್ಟಕ್ಕೆ ಸಿಲುಕಿಸುವ ಸರ್ವಾಧಿಕಾರಿ ನಿರ್ಧಾರವಾಗಿದೆ ಎಂದು ದೂರಿದರು.
ಈ ಸಂದರ್ಭದಲ್ಲಿ ಬೆಳಗಾವಿ ವಿಭಾಗದ ಪ್ರಭಾರಿಗಳಾದ ಚಂದ್ರಶೇಖರ ಕವಟಗಿ ಮಾತನಾಡಿ, ಪೆಟ್ರೋಲ್ ಬೆಲೆ ಲಿಟರ್ ಗೆ 3 ರೂ. ಖಸೇಲ್ ಬೆಲೆ 3.5 ರೂ ಹೆಚ್ಚಳದ ಅವಿವೇಕದ ಮತ್ತು ಜನವಿರೋಧಿ ನಿರ್ಧಾರವನ್ನು ಕಾಂಗ್ರೆಸ್ ಸಕಾರ ಕೈಗೊಂಡಿದೆ. ಬೆಲೆ ಏರಿಸಿದ ದರ ಹಿಂಪಡೆಯುವವರೆಗೂ ಬಿಜೆಪಿ ಹೋರಾಟ ನಿರಂತರವಾಗಿರುತ್ತದೆ ಎಂದರು.
ಈ ಸಂದರ್ಭದಲ್ಲಿ ನಗರದ ಮಂಡಲ ಅಧ್ಯಕ್ಷ ಶಂಕರ ಹೂಗಾರ ಮಾತನಾಡಿ, 18 ರಿಂದ 19 ಸ್ಥಾನ ಗೆಲ್ಲುವ ನಿರೀಕ್ಷೆಯನ್ನು ಕಾಂಗ್ರೆಸ್ ಮುಖಂಡರು ಇಟ್ಟುಕೊಂಡಿದ್ದರು, ಅವರು ಈಗ ಹತಾಶರಾಗಿದ್ದಾರೆ. ಹತಾಶರಾಗಿ ಬೆಲೆ ಏರಿಕೆಗೆ ಮುಂದಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಮಂಜುನಾಥ ಮೀಸೆ, ಇಂಡಿಯ ಕಾಸುಗೌಡ ಬಿರಾದಾರ, ಗುರಲಿಂಗಪ್ಪ ಅಂಗಡಿ, ಸ್ವಪ್ನಾ ಕಣಮುಚನಾಳ ಮಾತನಾಡಿದರು.
ಈ ಸಂದರ್ಭದಲ್ಲಿ ಜನತಾ ಪಾರ್ಟಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಹಾಗೂ ಮಹಾನಗರ ಪಾಲಿಕೆ ಸದಸ್ಯ ಮಳುಗೌಡ ಪಾಟೀಲ, ಸಾಬು ಮಾಶ್ಯಾಳ, ಈರಣ್ಣ ರಾವುರ, ಪ್ರಭುಗೌಡ ಅಸ್ಕಿ, ಸಿದ್ದು ಬುಳ್ಳಾ, ಸುರೇಶ ಬಿರಾದಾರ, ಚಿದಾನಂದ ಚಲವಾದಿ, ಶ್ರೀನಿವಾಸ ಕಂದಗಲ, ಅನೀಲ ಉಪ್ಪಾರ, ಮಹೇಂದ್ರ ನಾಯಕ, ರಾಜಕುಮಾರ ಸಗಾಯಿ, ಗೂಳಪ್ಪ ಶಟಗಾರ, ಶರಣು ಕಾಖಂಡಕಿ, ಸಂತೋಷ ಪಾಟೀಲ ಡಂಬಳ, ರಾಕೇಶ ಕುಲಕರ್ಣಿ, ಮಲ್ಲಿಕಾರ್ಜುನ ಕಿವಡೆ, ವಿಜಯ ಜೋಶಿ, ಶಂಕರಗೌಡ ಪಾಟೀಲ, ಕಾಂತು ಶಿಂಧೆ, ಜಗದೀಶ ಮುಚ್ಚಂಡಿ, ಪಾಪುಸಿಂಗ ರಜಪೂತ, ವಿಕಾಸ ಪದಕಿ, ಶರಣಬಸು ಕುಂಬಾರ, ರಾಜೇಶ ತವಸೆ,ಆನಂದ ಮುಚ್ಚಂಡಿ, ಶಿವಾನಂದ ಮಕಣಾಪೂರ, ಗುರು ತಳವಾರ, ರಾಘು ಕಾಪ್ಸೆ, ಸೀತಲಕುಮಾರ ಓಗಿ, ಶೀಲವಂತ ಉಮರಾಣಿ, ಮಹಾನಗರ ಪಾಲಿಕೆ ಸದಸ್ಯರಾದ ಶಿವರುದ್ರ ಬಾಗಲಕೋಟ, ಕಿರಣ ಪಾಟೀಲ, ಪ್ರೇಮಾನಂದ ಬಿರಾದಾರ, ರಾಹುಲ ಜಾಧವ, ವಿಠ್ಠಲ ಹೊಸಪೇಟೆ, ಮಲ್ಲಿಕಾರ್ಜು ಗಡಗಿ, ಮಹೇಶ ಒಡೆಯರ ಮತ್ತು ಪ್ರವೀನ ಕೂಡಗಿ, ವಿಠ್ಠಲ ನಡುವಿನಕೇರಿ, ಪ್ರಕಾಶ ಚವ್ಹಾಣ, ದತ್ತಾ ಗೋಲಾಂಡೆ, ರಾಹುಲ ಆಪ್ಟೆ, ಪ್ರವೀಣ ವಂದಾಲಮಠ, ಸಂತೋಷ ಭೋವಿ, ಸಂತೋಷ ಕುರದಡ್ಡಿ, ವಿನೋದ ಪತ್ತಾರ, ಸಂಗಮೇಶ ಉಕ್ಕಲಿ, ಅನೀಲ ಉಪ್ಪಾರ, ಸಂತೋಷ ನಿಂಬರಗಿ, ಸುಚೀತಾ ಜಾಧವ, ಮಧು ಪಾಟೀಲ, ಸುವರ್ಣ ಕುರ್ಲೆ, ಈರಣ್ಣ ಶಿರಮಗೊಂಡ, ಆನಂದ, ರಾಚು ಬಿರಾದಾರ, ಈರಣ್ಣಾ ಬಿರಾದಾರ, ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ

ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ

ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ಕಳ್ಳರ ಹಾವಳಿ: ಭಯಭೀತಿಯಲ್ಲಿ ನಾಗರಿಕರು
    In (ರಾಜ್ಯ ) ಜಿಲ್ಲೆ
  • ಅಂತರ್ಜಾಲದ ಬಳಕೆ ಅತ್ಯಂತ ಜಾಗರೂಕತೆಯಿಂದ ನಿರ್ವಹಣೆ ಮಾಡಿ
    In (ರಾಜ್ಯ ) ಜಿಲ್ಲೆ
  • ದ್ವೇಷ ಭಾಷಣ ವಿರೋಧಿ ಮಸೂದೆಗೆ ರಾಜ್ಯಪಾಲರು ಒಪ್ಪಬಾರದು
    In (ರಾಜ್ಯ ) ಜಿಲ್ಲೆ
  • ಪಿಪಿಪಿ ಮಾದರಿ ಬಿಜೆಪಿ ಹಾಗೂ ಮೋದಿ ಅವರ ಕೂಸು
    In (ರಾಜ್ಯ ) ಜಿಲ್ಲೆ
  • ಸಾರವಾಡ ಸುತ್ತಮುತ್ತಲಿನ ಗ್ರಾಮಗಳಿಗೆ ನೀರಾವರಿ ಸೌಲಭ್ಯಕ್ಕೆ ಬದ್ಧ
    In (ರಾಜ್ಯ ) ಜಿಲ್ಲೆ
  • ದೇಹ ದಾರ್ಡ್ಯ ಸ್ಪರ್ಧೆ: ಎಸ್.ಎಸ್.ಬಿ. ಪ್ರತಿಭೆ ಪ್ರಜ್ವಲ ಗೆ ಬೆಳ್ಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.