ವಿಜಯಪುರ: ನೀಟ್ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿದ್ದು ನೀಟ್ ಪರೀಕ್ಷೆ ನಿಷ್ಪಕ್ಷಪಾತವಾಗಿ ತನಿಖೆ ಮಾಡಬೇಕು ಎಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ವಿಜಯಪುರ (NSUI )ಅಧ್ಯಕ್ಷ ಅಮಿತ ಚವ್ಹಾಣ ಆಗ್ರಹಿಸಿದ್ದಾರೆ.
ಪರೀಕ್ಷೆಯ ವಿಸ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಏನ್ ಟಿ ಎ ಆಗಲಿ ಕೇಂದ್ರ ಸರ್ಕಾರವಾಗಲಿ ಉತ್ತರಿಸದೆ ಇರುವುದು ಲಕ್ಷಾಂತರ ಯುವ ಜನರ ಭವಿಷ್ಯ ಮಣ್ಣುಪಾಲು ಮಾಡಲು ಹೊರಟಿದೆ. ನೀಟ್ ಪರೀಕ್ಷೆಯಲ್ಲಿ 67 ವಿದ್ಯಾರ್ಥಿಗಳು 720ಕ್ಕೆ 720ಅಂಕಗಳು ಬಂದಿವೆ. ಪರೀಕ್ಷೆಯಲ್ಲಿ ಪ್ರತಿ ತಪ್ಪು ಉತ್ತರಕ್ಕೆ ಋಣಾತ್ಮಕ ಅಂಕಗಳಿರುವ ಕಾರಣ ಇಷ್ಟೊಂದು ಮಂದಿ ಶೇ% 100ರಷ್ಟು ಗಳಿಸಲು ಹೇಗೆ ಸಾಧ್ಯ? ಇದನ್ನು ಕೇಂದ್ರ ಸರ್ಕಾರ ಸ್ಪಷ್ಟಪಡಿಸಬೇಕೆಂದು ಚವ್ಹಾಣ ಪತ್ರಿಕಾ ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.
Subscribe to Updates
Get the latest creative news from FooBar about art, design and business.
ನೀಟ್ ಪರೀಕ್ಷೆಯಲ್ಲಿ ಅಕ್ರಮ: ನಿಷ್ಪಕ್ಷಪಾತ ತನಿಖೆಗೆ NSUI ಆಗ್ರಹ
Related Posts
Add A Comment

