ಮುದ್ದೇಬಿಹಾಳ: ರಥೋತ್ಸವದ ವೇಳೆ ರಥದ ಕೆಳಗೆ ಜಾರಿ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ತಾಲೂಕಿನ ಬಸರಕೋಡದಲ್ಲಿ ಗುರುವಾರ ಸಂಜೆ ನಡೆದಿದೆ.
ಬಸರಕೋಡ ಪವಾಡ ಬಸವೇಶ್ವರ ಜಾತ್ರೋತ್ಸವದ ಅಂಗವಾಗಿ ಗುರುವಾರ ಸಂಜೆ ರಥೋತ್ಸವ ಜರುಗುತ್ತಿದ್ದ ವೇಳೆ ಗ್ರಾಮಸ್ಥ ನಾಗಪ್ಪ ಯಲ್ಲಪ್ಪ ವಣಕ್ಯಾಳ (24) ಎಂಬಾತ ರಥಕ್ಕೆ ಕಟ್ಟಿದ್ದ ಹಗ್ಗ ಹಿಡಿದ ವೇಳೆ ಆಯತಪ್ಪಿ ಜಾರಿ ಬಿದ್ದಿದ್ದಾನೆ ಎನ್ನಲಾಗಿದೆ. ರಥದ ಚಕ್ರಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಅಕ್ಕಪಕ್ಕದಲ್ಲಿದ್ದ ಜನರು, ಪೊಲೀಸರು ತಕ್ಷಣ ರಕ್ಷಿಸಿ ತಾಲೂಕಾಸ್ಪತ್ರೆಗೆ ಕಳುಹಿಸಿದ್ದಾರೆ. ಚಕ್ರ ಹರಿದಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದ ಆತ ಬಾಗಲಕೋಟ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ ಎಂದು ಮೂಲಗಳು ತಿಳಿಸಿವೆ. ಮುದ್ದೇಬಿಹಾಳ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಸ್ಥಳಕ್ಕೆ ಪಿಎಸೈ ಆರೀಫ ಮುಶಾಪುರಿ ಸಿಬ್ಬಂದಿ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಂಡಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment