ವಿಜಯಪುರ: ಜೂ.೧೮: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಲ್ಲಾ ಕಾರ್ಯಕ್ರಮಗಳಲ್ಲಿ ಬಹುತೇಕ ಕಲಾ ತಂಡಗಳಿಗೆ ಅವಕಾಶ ಕಲ್ಪಿಸಲಾಗುತ್ತಿದ್ದು, ಕಲಾವಿದರ ವಿವರಗಳನ್ನು ಕ್ರೋಡೀಕರಿಸುವ ದೃಷ್ಟಿಯಿಂದ ಜಿಲ್ಲೆಯಲ್ಲಿರುವ ಕಲಾವಿದರ ಹಾಗೂ ಕಲಾತಂಡಗಳ ಪಟ್ಟಿ ಸಿದ್ಧಪಡಿಸಿ, ಅವರಿಗೆ ಗುರುತಿನ ಚೀಟಿಗಾಗಿ ಕಲಾವಿದರು, ಕಲಾ ತಂಡದವರು ತಮ್ಮ ಸ್ವ-ವಿವರದ ಮಾಹಿತಿ ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಇಲಾಖೆಯಿಂದ ನಮೂನೆಯನ್ನು ಪಡೆದುಕೊಂಡು, ಆಧಾರ ಗುರುತಿನ ಚೀಟಿ, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ಪ್ರತಿಷ್ಠಿತ ಸಂಘ ಸಂಸ್ಥೆಗಳಿಂದ ಪಡೆದ ಪ್ರಶಸ್ತಿ, ಪುರಸ್ಕಾರಗಳ ವಿವರ ಪ್ರಮುಖ ಪ್ರದರ್ಶನಗಳ ವಿವರ ಲೇಖನ, ಶಿಲ್ಪದ ಇ-ಪುಸ್ತಕ, ಕಲಾ ಪ್ರದರ್ಶನಗಳ ಛಾಯಾಚಿತ್ರಗಳನ್ನು ಲಗತ್ತಿಸಿ ಇದೇ ಜೂನ್ ೨೬ರ ಒಳಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ, ಸ್ಟೇಷನ್ ರಸ್ತೆ ವಿಜಯಪುರ ವಿಳಾಸಕ್ಕೆ ಸಲ್ಲಿಸುವಂತೆ, ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ-೦೮೩೫೨-೨೫೧೨೬೧ ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕರಣಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಗುರುತಿನ ಚೀಟಿ: ಕಲಾವಿದರು ಹಾಗೂ ಕಲಾತಂಡಗಳಿಂದ ಅರ್ಜಿ ಆಹ್ವಾನ
Related Posts
Add A Comment
