Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೈತರು ಸರ್ಕಾರದ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು
(ರಾಜ್ಯ ) ಜಿಲ್ಲೆ

ರೈತರು ಸರ್ಕಾರದ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರೈತ ಕೃಷಿ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿದ ಜಂಟಿ ಕೃ಼ಷಿ ನಿರ್ದೇಶಕ ಡಾ.ವಿಲಿಯಂ ರಾಜಶೇಖರ ಸಲಹೆ

ಬಸವನಬಾಗೇವಾಡಿ: ಪಟ್ಟಣದ ಕೃಷಿ ಇಲಾಖೆಯ ಆವರಣದಲ್ಲಿರುವ ರೈತ ಕೃಷಿ ಸಂಪರ್ಕ ಕೇಂದ್ರಕ್ಕೆ ಜಿಲ್ಲಾ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಡಾ.ವಿಲಿಯಂ ರಾಜಶೇಖರ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.
ರೈತ ಕೃಷಿ ಸಂಪರ್ಕ ಕೇಂದ್ರಕ್ಕೆ ಬೀಜ ತೆಗೆದುಕೊಳ್ಳಲು ಆಗಮಿಸಿದ್ದ ರೈತ ಬಾಂಧವರೊಂದಿಗೆ ಮಾತನಾಡಿದ ಅವರು, ಬೀಜಗಳು ಸರಿಯಾಗಿ ವಿತರಣೆಯಾಗುತ್ತಿರುವ ಕುರಿತು ಮಾಹಿತಿ ಪಡೆದುಕೊಂಡರು. ಬೀಜ ವಿತರಣೆಯಲ್ಲಿ ಏನಾದರೂ ತೊಂದರೆಯಾದರೆ ನಮ್ಮ ಗಮನಕ್ಕೆ ತರಬೇಕು. ರೈತ ಕೃಷಿ ಸಂಪರ್ಕ ಕೇಂದ್ರಗಳಲ್ಲಿ ಎಲ್ಲ ಅಗತ್ಯ ಬೀಜಗಳು ದಾಸ್ತಾನು ಇದೆ. ಬೀಜಗಳಿಗೆ ಸರಿಯಾಗಿ ಬೀಜೋಪಚಾರ ಮಾಡಿ ಬಿತ್ತನೆ ಕಾರ್ಯ ಕೈಗೊಳ್ಳಬೇಕು. ಇದರಿಂದಾಗಿ ಮುಂದಿನ ದಿನಗಳಲ್ಲಿ ಬೆಳೆಗಳು ಯಾವುದೇ ರೋಗ, ಕೀಟಬಾಧೆಗೆ ತುತ್ತಾಗುವದಿಲ್ಲ. ಈಗ ಬಿತ್ತನೆಗೆ ಸಕಾಲಿಕವಾಗಿದೆ. ರೈತ ಬಾಂಧವರು ಬಿತ್ತನೆ ಕಾರ್ಯ ಕೈಗೊಳ್ಳಬಹುದು. ಸರ್ಕಾರ ರೈತ ಬಾಂಧವರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು. ಇದೇ ಸಂದರ್ಭದಲ್ಲಿ ಆಗಮಿಸಿದ ರೈತ ಬಾಂಧವರಿಗೆ ಬೀಜಗಳ ಪ್ಯಾಕೆಟ್ಗಳನ್ನು ವಿತರಿಸಿದರು. ರೈತ ಬಾಂಧವರು ಗುಣಮಟ್ಟದ ಬೀಜಗಳು ಪೂರೈಕೆಯಾಗಿವೆ ಎಂದು ಜಂಟಿ ಕೃಷಿ ನಿರ್ದೇಶಕರ ಗಮನಕ್ಕೆ ತಂದರು.
ತಾಲೂಕು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಎಂ.ಎಚ್.ಯರಝರಿ ಅವರು, ಅಖಂಡ ತಾಲೂಕಿನಲ್ಲಿ ತೊಗರಿ, ಮೆಕ್ಕೇಜೋಳ, ಸಜ್ಜೆ ಬೀಜ ಸೇರಿದಂತೆ ಅಗತ್ಯ ಬೀಜಗಳ ದಾಸ್ತಾನು ಇದೆ. ರೈತ ಬಾಂಧವರಿಗೆ ತೊಂದರೆಯಾಗದಂತೆ ಬೀಜಗಳ ವಿತರಣೆ ಕಾರ್ಯ ನಡೆಯುತ್ತಿದೆ. ಸರದಿಯಂತೆ ಕೂಪನ್ ನೀಡಿ ಬೀಜ ನೀಡಲಾಗುತ್ತಿದೆ. ರೈತ ಬಾಂಧವರು ಸಹಕಾರ ನೀಡುವ ಮೂಲಕ ಬೀಜಗಳನ್ನು ಪಡೆದುಕೊಳ್ಳಬೇಕೆಂದರು.
ರಸಗೊಬ್ಬರ ಮಳಿಗೆಗಳಿಗೆ ಭೇಟಿಃ ಪಟ್ಟಣದಲ್ಲಿರುವ ವಿವಿಧ ರಸಗೊಬ್ಬರ ಮಳಿಗೆಗಳಿಗೆ ಜಂಟಿ ಕೃಷಿ ನಿರ್ಧೇಶಕ ಡಾ. ವಿಲಿಯಂ ರಾಜಶೇಖರ ಅವರು ಕೃಷಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಅಲ್ಲಿರುವ ಗೊಬ್ಬರ ದಾಸ್ತಾನು ಪರಿಶೀಲಿಸಿದರು.
ರಸಗೊಬ್ಬರ ಮಳಿಗೆಗಳ ಮಾಲೀಕರಿಗೆ ಅವರು, ಮಳಿಗೆಯಲ್ಲಿ ಎಲ್ಲ ಗೊಬ್ಬರಗಳ ದರ ಪಟ್ಟಿ ಪ್ರದರ್ಶಿಸಬೇಕು. ಸರ್ಕಾರ ನಿಗದಿಪಡಿಸಿದ ಗೊಬ್ಬರದ ದರದಲ್ಲಿ ಮಾರಾಟ ಮಾಡಬೇಕು. ಯಾವುದೇ ಕಾರಣಕ್ಕೂ ಗೊಬ್ಬರವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಬಾರದು. ರೈತ ಬಾಂಧವರಿಗೆ ಕಡ್ಡಾಯವಾಗಿ ಗೊಬ್ಬರ ಮಾರಾಟದ ರಶೀದಿ ನೀಡಬೇಕು. ಸರ್ಕಾರ ನಿಗದಿಪಡಿಸಿದ ದರಕ್ಕೆ ಗೊಬ್ಬರವನ್ನು ಮಾರಾಟ ಮಾಡಬೇಕು. ಒಂದು ವೇಳೆ ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು ಕಂಡು ಬಂದರೆ ಅಂತಹವರ ಮೇಲೆ ಕ್ರಮ ತೆಗೆದುಕೈಗೊಳ್ಳಬೇಕಾಗುತ್ತದೆ. ಅವಧಿ ಮುಗಿದ ಕೀಟನಾಶಕಗಳನ್ನು ಯಾವುದೇ ಕಾರಣಕ್ಕೂ ಮಾರಾಟ ಮಾಡಬಾರದು. ಕೀಟನಾಶಕಗಳನ್ನು ಮಾರಾಟ ಮಾಡುವಾಗ ರೈತ ಬಾಂಧವರಿಗೆ ಅವುಗಳ ಉಪಯೋಗಿಸುವ ಕುರಿತು ಎಚ್ಚರಿಕೆ ಕ್ರಮಗಳನ್ನು ತಿಳಿಸಬೇಕು. ರೈತ ಬಾಂಧವರ ಬಿತ್ತನೆಗೆ ಸಮರ್ಪಕವಾದ ಗೊಬ್ಬರವನ್ನು ಸಿಗುವಂತೆ ನೋಡಿಕೊಳ್ಳಬೇಕೆಂದರು. ಈ ಸಂದರ್ಭದಲ್ಲಿ ತಾಲೂಕು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಎಂ.ಎಚ್.ಯರಝರಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಚಿದಾನಂದ ಹಿರೇಮಠ, ಕೃಷಿ ಅಧಿಕಾರಿ ಆರ್.ಬಿ.ಕುಲಕರ್ಣಿ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.