Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಡಚಣ ಶೂಟೌಟ್ ಪ್ರಕರಣ ಭೇದಿಸಿದ ಪೊಲೀಸರು :ಈರ್ವರ ಬಂಧನ
(ರಾಜ್ಯ ) ಜಿಲ್ಲೆ

ಚಡಚಣ ಶೂಟೌಟ್ ಪ್ರಕರಣ ಭೇದಿಸಿದ ಪೊಲೀಸರು :ಈರ್ವರ ಬಂಧನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲೆಯ ಚಡಚಣ ಪಟ್ಟಣದಲ್ಲಿ ಶನಿವಾರ ನಡೆದ ಶೂಟೌಟ್ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ.
ವಿಜಯಪುರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಎಸ್ಪಿ ಋಷಿಕೇಶ ಸೋನಾವಣೆ, ಈ ಪ್ರಕರಣ ಸಂಬಂಧ ಚಡಚಣ ಪಟ್ಟಣದವರೇ ಆದ ಆರೋಪಿ ಇಸ್ಮಾಯಿಲ್ ಗುಲಾಬಸಾಬ ಶೇಖ(29) ಮತ್ತು ಜಾಫರ್ ಲಾಲಸಾಬ ಮಸಳಿ(36) ಎಂಬುವರನ್ನು ಇಂದು ಮಧ್ಯಾಹ್ನ 12.10ರಕ್ಕೆ ಮಹಾರಾಷ್ಟ್ರದ ಸೋಲಾಪೂರದಲ್ಲಿ ಬಂಧಿಸಲಾಗಿದೆ. ಅಲ್ಲದೇ ಅವರ ಬಳಿಯಿದ್ದ ಒಂದು ಕಂಟ್ರಿ ಪಿಸ್ತೂಲು ಮತ್ತು ಮೂರು ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಬಂಧಿತ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಇನ್ನುಳಿದ ಆರೋಪಿಗಳ ಬಂಧನಕ್ಕಾಗಿ ಜಾಲ ಬೀಸಲಾಗಿದೆ. ಈ ಪ್ರಕರಣದ ತನಿಖೆ ಮುಂದುವರೆದಿದೆ ಎಂದು ತಿಳಿಸಿದರು.
ಅಲ್ಲದೇ, ಈ ಪ್ರಕರಣದ ಪತ್ತೆ ಕಾರ್ಯದಲ್ಲಿ ಕಾರ್ಯ ನಿರ್ವಹಿಸಿದ ಪಿಎಸ್‌ಐ ಗಳಾದ ಸಂಜಯ ಕಲ್ಲೂರ, ಎಸ್. ವಿ. ಗೊಳಸಂಗಿ, ಎಎಸ್‌ಐ ರಂಗೂ ರಾಠೋಡ, ಪೇದೆಗಳಾದ ಎಂ. ಎನ್. ಹೊನ್ನಾಕಟ್ಟಿ, ಎಂ. ಜಿ. ಪವಾರ, ಆರ್. ಎಚ್. ಡೊಣಗಿ, ಮಲ್ಲು ದ್ಯಾಮಗೋಳ, ಶೇಖರ ಲಮಾಣಿ, ಎಸ್. ಜಿ. ನಾವಿ, ತನಿಖಾ ಸಹಾಯಕ ಎ. ಆರ್. ಮಕಾನದಾರ ಹಾಗೂ ಸಿಬ್ಬಂದಿಗಳ ಕರ್ತವ್ಯವನ್ನು ಎಸ್ಪಿ ಋಷಿಕೇಶ ಸೋನಾವಣೆ ಶ್ಲಾಘಿಸಿದ್ದಾರೆ.
ಘಟನೆಯ ಹಿನ್ನೆಲೆ
ಚಡಚಣ ಪಟ್ಟಣದ ನೀವರಗಿ ಕ್ರಾಸ್ ಬಳಿ ಅವಜಿ ಎಂಬುವರ ಮನೆಯ ಹತ್ತಿರ ಜೂ. 16 ರಂದು ಶನಿವಾರ ಮಧ್ಯಾಹ್ನ 12.15 ಸುಮಾರಿಗೆ ಅಶೋಕ ಮಲ್ಲಪ್ಪ ಗಂಟಗಲ್ ಎಂಬುವರ ಮೇಲೆ ಯಾರೋ ಆರೋಪಿತರು ಯಾವುದೋ ಉದ್ದೇಶಕ್ಕಾಗಿ, ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ ಎಂದು ಆತನ ಪತ್ನಿ ಮತ್ತು ಚಡಚಣ ಪಟ್ಟಣ ಪಂಚಾಯಿತಿ ಬಿಜೆಪಿ ಸದಸ್ಯೆ ಸೋನಾಬಾಯಿ ಅಶೋಕ ಗಂಟಗಲ್ ದೂರು ನೀಡಿದ್ದರು.
ಈ ಕುರಿತು ಪ್ರಕರಣ ದಾಖಲಿಸಿಕೊಂಡ ಬಳಿಕ ಎಸ್ಪಿ ಋಷಿಕೇಶ ಸೋನಾವಣೆ ಅವರು ಈ ಪ್ರಕರಣದ ತನಿಖೆಗಾಗಿ ಹೆಚ್ಚುವರಿ ಎಸ್ಪಿ ಶಂಕರ, ಮರಿಹಾಳ ಮತ್ತು ರಾಮನಗೌಡ, ಹಟ್ಟಿ ಅವರ ಮಾರ್ಗದರ್ಶನದಲ್ಲಿ ಇಂಡಿ ಡಿವೈಎಸ್ಪಿ ಜಗದೀಶ ಎಚ್. ಎಸ್, ಚಡಚಣ ಸಿಪಿಐ ಸುರೇಶ ಬೆಂಡೆಗುಂಬಳ ಪಿಎಸ್‌ಐ ಸಂಜಯ ಕಲ್ಲೂರ ಮತ್ತು ಸಿಬ್ಬಂದಿಯ ನೇತೃತ್ವದಲ್ಲಿ ತಂಡ ರಚಿಸಿದ್ದರು. ರೌಡಿಶೀಟರ್ ಆಗಿದ್ದ ಅಶೋಕ ಗಣಗಲ್ ಇತ್ತೀಚೆಗೆ ಜೈಲಿನಿಂದ ಪೆರೋಲ್ ಮೇಲೆ ಹೊರ ಬಂದಿದ್ದ. ತನ್ನ ಆತ ತನ್ನ ಹೊಲಕ್ಕೆ ಬೈಕಿನಲ್ಲಿ ಹೊರಡುವಾಗ ಗುಂಡಿನ ದಾಳಿ ನಡೆದ ಪರಿಣಾಮ ಸ್ಥಳದಲ್ಲಿಯೇ ಸಾವಿಗೀಡಾಗಿದ್ದ.
ಈ ಕುರಿತು ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲೆಯಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.