ಕೆಂಭಾವಿ: ಪಟ್ಟಣದಲ್ಲಿ ಹೈಟೆಕ್ ಬಸ್ಸ್ ನಿಲ್ದಾಣ ನಿರ್ಮಾಣ ಮಾಡುವಂತೆ, ಟೀಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ಬುಧವಾರ ಸುರಪುರದಲ್ಲಿ ಜರುಗಿದ ತಾಲೂಕು ಜನಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿತು.
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅಧ್ಯಕ್ಷ ಬಂದೇನವಾಜ್ ಆಯ್ ನಾಲತ್ತವಾಡ ಪುರಸಭೆ ಹಾಗೂ ಹೋಬಳಿ ಕೇಂದ್ರವಾಗಿದ್ದು, ಈಗಿರುವ ಬಸ್ಸ್ ನಿಲ್ದಾಣ ಚಿಕ್ಕದಾಗಿ, ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು , ಕುಳಿತುಕೊಳ್ಳಲು ಸರಿಯಾದ ಆಸನದ ವ್ಯವಸ್ಥೆ ಇಲ್ಲದಿರುವುದು, ವಯೋವೃದ್ಧರು, ಅಂಗವಿಕಲರ, ಮಹಿಳೆಯರು ಮಕ್ಕಳು ದಿನಂಪ್ರತಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸುಮಾರು 150 ಕ್ಕೂ ಹೆಚ್ಚು ಬಸ್ಸುಗಳು ಓಡಾಡುತ್ತವೆ. ಆದರೆ 10 ಬಸ್ಸುಗಳು ನಿಲ್ಲುವ ಸಾಮರ್ಥ್ಯ ಹೊಂದಿದ್ದು. ಕೂಡಲೇ ಸಾರಿಗೆ ಇಲಾಖೆ ಅಧಿಕಾರಿಗಳು ತಮ್ಮ ಸ್ವಾಧೀನದಲ್ಲಿರುವ ಸ್ಥಳದಲ್ಲಿ ಹೈಟೆಕ್ ಬಸ್ಸ್ ನಿಲ್ದಾಣ ನಿರ್ಮಾಣ ಮಾಡಲು ಆಗ್ರಹಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

