ವಿಜಯಪುರ: ಕಾಂಗ್ರೆಸ್ ಸರಕಾರವು ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಡಗಳ ಅನುದಾನವನ್ನು ಸದರಿ ಜನಾಂಗಕ್ಕೆ ನೀಡದೇ ತನ್ನ ಗ್ಯಾರೆಂಟಿ ಯೋಜನೆಗಳಿಗೆ ಬಳಸಿಕೊಂಡಿರುವುದನ್ನು ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಮುತ್ತಣ್ಣ ಬ. ಸಾಸನೂರ (ವಕೀಲರು) ಖಂಡಿಸಿದ್ದಾರೆ.
ಸರ್ಕಾರದ ಈ ಕ್ರಮ ಕಾನೂನು ಬಾಹಿರವಾಗಿದೆ. ತಮ್ಮ ಬ್ಯಾಳೆ ಬೇಯಿಸಿಕೊಳ್ಳುವುದಕ್ಕೆ ಹಾಗೂ ತಾವು ಅಧಿಕಾರದಲ್ಲಿ ಇರುವುದಕ್ಕಾಗಿ ದೀನ-ದಲಿತರ ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡಗಳ ಸುಮಾರು ೨೪ ಸಾವಿರ ಕೋಟಿ ರೂ.ಗಳಷ್ಟು ಅನುದಾನವನ್ನು ತನ್ನ ಗ್ಯಾರೆಂಟಿ ಯೋಜನೆಗಳಿಗೆ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಹಾಗೂ ಸಚಿವ ಸಂಪುಟವೇ ನೇರವಾಗಿ ಹೊಣೆಯಾಗುತ್ತದೆ ಹಾಗೂ ವಿಜಯಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಸರಕಾರವು ಅಧಿಕಾರಕ್ಕೆ ಬಂದು ಸುಮಾರು ೨ ವರ್ಷಗಳಾಗುತ್ತಿದ್ದು, ಇಲ್ಲಿಯವರೆಗೆ ಯಾವುದೇ ಅಭಿವೃದ್ದಿ ಕಾಮಗಾರಿಗಳ/ ಯೋಜನೆಗಳನ್ನು ವಿಜಯಪುರ ಜಿಲ್ಲೆಯಲ್ಲಿ ಜಾರಿಗೊಳಿಸಿಲ್ಲ. ಇದರಿಂದ ವಿಜಯಪುರ ಜಿಲ್ಲೆಯು ಅಭಿವೃದ್ದಿ ದೃಷ್ಟಿಯಿಂದ ಕುಂಠಿತಗೊಳ್ಳುತ್ತಿದೆ. ಇದಕ್ಕೆ ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲರು ಹೊಣೆಗಾರರಾಗುತ್ತಾರೆ.
ಏಕೆಂದರೆ ಅವರು ವಿಜಯಪುರ ಜಿಲ್ಲೆಯ ಅಭಿವೃದ್ದಿ ಕಡೆಗೆ ಗಮನ ಹರಿಸದೇ ಕೇವಲ ಗ್ಯಾರೆಂಟಿ ಯೋಜನೆಗಳ ಹಾಗೂ ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡಗಳ ಅನುದಾನವನ್ನು ಗ್ಯಾರೆಂಟಿ ಯೋಜನೆಗಳಿಗೆ ಬಳಸುತ್ತಿರುವದು ಕಾನೂನು ಬಾಹಿರವಾಗಿದೆ. ಕೆಡಿಪಿ ಸಭೆಯಲ್ಲಿ ಅಭಿವೃದ್ದಿಯ ಬಗ್ಗೆ ಕೇಳಿದರೆ ಗ್ಯಾರೆಂಟಿ ಯೋಜನೆಗಳಿಗೆ ಹಣ ಸಾಲುತ್ತಿಲ್ಲ. ಇನ್ನು ಜಿಲ್ಲೆಯ ಅಭೀವೃದ್ದಿ ಹೇಗೆ ಸಾಧ್ಯವೆಂದು ಉಡಾಫೆ ಉತ್ತರ ನೀಡುವ ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವರು ನಮಗೆ ದೊರೆಕಿರುವದು ದುರ್ದೈವದ ಸಂಗತಿಯಾಗಿದೆ. ಆದ್ದರಿಂದ ಗ್ಯಾರೆಂಟಿ ಯೋಜನೆಗಳಿಗೆ ಬಳಕೆಯಾಗುತ್ತಿರುವ ಸುಮಾರು ೨೪ ಸಾವಿರ ಕೋಟಿ ರೂ.ಗಳನ್ನು ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡಕ್ಕೆ ಮೀಸಲಿಸಬೇಕು. ಹಾಗೂ ವಿಜಯಪುರ ಜಿಲ್ಲೆಯ ಕಡೆಗೆ ಸರಕಾರ ಕಾಳಜಿ ವಹಿಸಬೇಕು. ಈ ಕುರಿತು ನಿಷ್ಕಾಜಿ ವಹಿಸುತ್ತಾ ಬಂದರೆ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿಯಿಂದ ಬೃಹತ್ ಮಟ್ಟದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧ್ಯಕ್ಷ ಮುತ್ತಣ್ಣ ಬ. ಸಾಸನೂರ (ವಕೀಲರು) ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

