ಸಿಂದಗಿ: ಜೂ.೨೦ರಂದು ಬೆಳಿಗ್ಗೆ ೧೧ಗಂಟೆಗೆ ಪಟ್ಟಣದ ಅಂಬೇಡ್ಕರ್ ವೃತದಲ್ಲಿ ಸಿಂದಗಿ ಬಿಜೆಪಿ ಮಂಡಲ ವತಿಯಿಂದ ಪ್ರತಿಭಟನೆ ಹಮ್ಮಿಕೊಂಡಿದ್ದು, ಸದರಿ ಪ್ರತಿಭಟನೆಯು ಮಾಜಿ ಶಾಸಕ ರಮೇಶ ಭೂಸನೂರ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಪೇಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಹಾಗೂ ರಾಜ್ಯದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ ಹಾಗೂ ವಾಲ್ಮೀಕಿ ನಿಗಮದ ಹಗರಣದ ವಿರುದ್ಧ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ ಬ್ರಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕಾರಣ ತಾಲೂಕಿನ ಬಿಜೆಪಿ ಪಕ್ಷದ ಮುಖಂಡರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು, ಮಂಡಲ ಅಧ್ಯಕ್ಷರು, ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬಿಜೆಪಿ ಮಂಡಲ ತಾಲೂಕಾಧ್ಯಕ್ಷ ಸಂತೋಷ ಪಾಟೀಲ ಡಂಬಳ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

