ಕೆಂಭಾವಿ: ಪಟ್ಟಣದಲ್ಲಿ
ಅಪರಿಚಿತ ವ್ಯಕ್ತಿಯೊಬ್ಬ ಅನಾರೋಗ್ಯದಿಂದ ಬಳಲುತ್ತಿದ್ದಾಗ ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ಅಪರಿಚಿತ ವ್ಯಕ್ತಿಯು ಅನಾರೋಗ್ಯದಿಂದ ನರಳುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ವೈದ್ಯಕೀಯ ಚಿಕಿತ್ಸೆಗಾಗಿ ಪಟ್ಟಣದ ಸಮುದಾಯದ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವನನ್ನು ಸುರಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಸದರಿ ವ್ಯಕ್ತಿಯ ಗುರುತು ಪತ್ತೆಯಾದಲ್ಲಿ ಕೆಂಭಾವಿ ಪೋಲೀಸ್ ಠಾಣೆಗೆ ಸಂಪರ್ಕಿಸಲು ಪಿಎಸ್ಐ ರಾಜಶೇಖರ ರಾಠೋಡ ಕೆಳಗಿನ ನಂಬರಿಗೆ ಕರೆ ಮಾಡಲು ತಿಳಿಸಿದ್ದಾರೆ.
ಮೊ.ನಂಬರ್: 9480803585
Subscribe to Updates
Get the latest creative news from FooBar about art, design and business.
Related Posts
Add A Comment

