ಬಸವನಬಾಗೇವಾಡಿ: ಶಿಕ್ಷಣವು ಸಾರ್ವತ್ರಿಕರಣಗೊಂಡಿದ್ದರೂ ಸಹ ಮಹಿಳೆಯು ಸಾಮಾಜಿಕ ಸಮಸ್ಯೆಗಳಿಂದ ಮುಕ್ತಗೊಂಡಿಲ್ಲ. ಇಂದು ಬಾಲ್ಯ ವಿವಾಹ, ವರದಕ್ಷಿಣೆ ಕಿರುಕುಳ, ಲೈಂಗಿಕ ದೌರ್ಜನ್ಯದಂತಹ ಅನೇಕ ಉಸಿರು ಗಟ್ಟಿಸುವಂತಹ ಸಮಸ್ಯೆಗಳು ಸಮಾಜದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವದನ್ನು ನೋಡಿದಾಗ ಮಹಿಳೆಯರಿಗೆ ಸ್ವಾತಂತ್ರ್ಯವೇ ಸಿಕ್ಕಿಲ್ಲವೆಂಬ ಭಾವನೆ ಬಂದರೂ ತಪ್ಪಾಗಲಾರದು ಎಂದು ಡಾ.ಗೀತಾ ಬೆಳ್ಳುಂಡಿ ಅಭಿಪ್ರಾಯ ಪಟ್ಟರು.
ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಮತ್ತು ಮಹಿಳಾ ವೇದಿಕೆಯ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಹಿಳೆಯ ಸಾಮಾಜಿಕ ಸಮಸ್ಯೆ ಮತ್ತು ಪರಿಹಾರ ವಿಷಯದ ಕುರಿತು ಹಮ್ಮಿಕೊಂಡಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಾತ್ಮಾ ಗಾಂಧೀಜಿಯವರ ರಾಮರಾಜ್ಯದ ಕನಸು ಇನ್ನೂ ಕನಸಾಗಿಯೇ ಉಳಿದುಕೊಂಡಿದೆ. ಅವರ ಕನಸು ನನಸಾಗಬೇಕಾದರೆ ಇಂದು ಮಹಿಳೆಯರು ಕಿತ್ತೂರು ರಾಣಿ ಚನ್ನಮ್ಮ, ಬೆಳವಡಿ ಮಲ್ಲಮ್ಮ, ಒನಕೆ ಒಬವ್ವ, ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅವರ ಧೈರ್ಯ, ತತ್ವ, ವಿಚಾರಗಳನ್ನು ಅಳವಡಿಸಿಕೊಂಡು ಸಮಾಜ ವಿರೋಧಿಗಳನ್ನು ಮಟ್ಟ ಹಾಕಿದಾಗ ಮಾತ್ರ ಮಹಿಳೆಯರು ಸಮಾಜದಲ್ಲಿ ಘನತೆ, ಗೌರವ, ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಅಧ್ಯಕ್ಷತೆಯ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ವ್ಹಿ.ಸೂರ್ಯವಂಶಿ ಮಾತನಾಡಿದರು.
ವೇದಿಕೆಯಲ್ಲಿ ಡಾ.ಶ್ರೀದೇವಿ ಜತ್ತಿ, ಮಹಿಳಾ ವೇದಿಕೆಯ ಅಧ್ಯಕ್ಷೆ ಡಾ.ಎಸ್.ಬಿ.ಜನಗೊಂಡ ಇದ್ದರು. ಕಾರ್ಯಕ್ರಮದಲ್ಲಿ ಎಲ್ಲ ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

