ವಿಜಯಪುರ, ಜೂ.೨೦ (ಕರ್ನಾಟಕ ವಾರ್ತೆ): ಗುರುವಾರ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-೨ರ ವಿಜ್ಞಾನ ವಿಷಯದಲ್ಲಿ ಜಿಲ್ಲೆಯ ಒಟ್ಟು ೫,೯೨೧ ವಿದ್ಯಾರ್ಥಿಗಳು ನೋಂದಾಯಿಸಿಕೊAಡಿದ್ದು, ಈ ಪೈಕಿ ೫,೦೮೦ ವಿದ್ಯಾರ್ಥಿಗಳು ಪರೀಕೆಗೆ ಹಾಜರಾಗಿ ೮೪೧ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ
ವಿಜಯಪುರ: ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜೂನ್. ೨೧ರಂದು ಬೆಳಿಗ್ಗೆ ೬ ಗಂಟೆಗೆ ೧೦ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ವಿವಿಧ ಗಣ್ಯ ವ್ಯಕ್ತಿಗಳು, ಶಾಲಾ-ಕಾಲೇಜ್ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಅಧಿಕಾರಿಗಳು ಸಿಬ್ಬಂದಿಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಭಾಗವಹಿಸಲಿವೆ ಎಂದು ಜಿಲ್ಲಾ ಆಯುಷ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
