ವಿಜಯಪುರ: ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ರಾಜ್ಯದ ೪ ಕಂದಾಯ ವಿಭಾಗಗಳಲ್ಲಿ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲೆಯನ್ನು ನಡೆಸಲಾಗುತ್ತಿದ್ದು, ಧಾರವಾಡ ವಿಭಾಗದ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲೆಗೆ ಪ್ರವೇಶ ಬಯಸುವ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪಿಯುಸಿ ಪರೀಕ್ಷೆಯಲ್ಲಿ ಕನಿಷ್ಠ ಶೇ.೪೦ ರಷ್ಟು ಹಾಗೂ ಎಸ್ಸಿ.ಎಸ್ಟಿ ಅಭ್ಯರ್ಥಿಗಳು ಕನಿಷ್ಠ ಶೇ.೩೫ರಷ್ಟು ಅಂಕ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಹಾಲಿ ಕಾರ್ಯ ನಿರ್ವಹಿಸುತ್ತಿರುವ ಇಲಾಖೆಯ ಡಿ ದರ್ಜೆ ಸಹವರ್ತಿ ಅಭ್ಯರ್ಥಿಗಳು ಸಂಬಂಧಿಸಿದ ಉಪನಿರ್ದೇಶಕರು- ಮುಖ್ಯ ಗ್ರಂಥಾಲಯಾಧಿಕಾರಿಗಳ ಮೂಲಕ ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರು ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಮೂಲಕ ಹಾಗೂ ಇತರೆ ಸಂಸ್ಥೆಯಿಂದ ಬರುವ ಅಭ್ಯರ್ಥಿಗಳು ತಮ್ಮ ಸಂಸ್ಥೆಯ ಮುಖ್ಯಸ್ಥರ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ದಿನಾಂಕ : ೧೯-೦೭-೨೦೨೪ ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ನಗರ ಕೇಂದ್ರ ಗ್ರಂಥಾಲಯ, ಡಿಸಿ ಕಚೇರಿಯ ಆವರಣ, ಧಾರವಾಡ-೫೮೦೦೦೧ ದೂ: ೦೮೩೬-೨೪೪೨೪೬೫ ಸಂಖ್ಯೆಗೆ ಸಂಪರ್ಕಿಸುವಂತೆ ವಿಜಯಪುರ ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
