ಜೂನ್ ೨೨ ರಂದು ಡಿಸಿಇಟಿ – ೨೦೨೪ ರ ಪ್ರವೇಶ ಪರೀಕ್ಷೆ
ವಿಜಯಪುರ: ನಗರದ ಬಾಲಕರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜೂ.೨೨ ರಂದು ಡಿಪ್ಲೋಮಾ ಅಭ್ಯರ್ಥಿಗಳಿಗೆ ಡಿಸಿಇಟಿ – ೨೦೨೪ ರ ಪ್ರವೇಶ ಪರೀಕ್ಷೆಗಳು ಜರುಗಲಿದ್ದು, ಎಲ್ಲ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಂಡು ವ್ಯವಸ್ಥಿತವಾಗಿ ಪರೀಕ್ಷೆ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶುಕ್ರವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಡಿಸಿಇಟಿ – ೨೦೨೪ ರ ಪ್ರವೇಶ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪ್ರಶ್ನೆಪತ್ರಿಕೆಗಳನ್ನ ಪರೀಕ್ಷೆ ಕೇಂದ್ರಗಳಿಗೆ ನಿಗಧಿತ ಸಮಯದಲ್ಲಿ ತಲುಪಿಸಲು ತಹಶೀಲ್ದಾರ, ಪ್ರಿನ್ಸಿಪಾಲ್, ಹಾಗೂ ಬಿಇಒ ಅವರ ತ್ರಿಸದಸ್ಯ ಸಮಿತಿ ರಚಿಸಲಾಗಿದ್ದು, ಸಮಿತಿ ಸದಸ್ಯರು ಕಡ್ಡಾಯವಾಗಿ ಬಯೋಮೆಟ್ರಿಕ್ ನೊಂದಣಿ ಮಾಡಿಕೊಳ್ಳಬೇಕು. ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆ ಪಡೆದುಕೊಂಡು ಪರೀಕ್ಷಾ ಕೇಂದ್ರಕ್ಕೆ ತಲುಪಿಸಬೇಕು. ಪರೀಕ್ಷೆ ಮುಗಿದ ನಂತರ ರಹಸ್ಯ ಬಂಡಲ್‌ಗಳನ್ನು ಸ್ವೀಕರಿಸಿ ನೇರವಾಗಿ ಅಂಚೆ ಕಚೇರಿಯ iಟಿsuಡಿeಜ ಠಿosಣ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರು ಇವರಿಗೆ ತಲುಪಿಸಲು ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.
ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರದ ೨೦೦ ಮೀಟರ್ ಸುತ್ತ ನಿಷೇಧಾಜ್ಞೆ ಜಾರಿಯಲ್ಲಿದ್ದು, ಸುತ್ತ ಮುತ್ತಲಿನ ಕಂಪ್ಯೂಟರ್, ಜೆರಾಕ್ಸ್, ನೆಟ್ ಸೆಂಟರ್‌ಗಳನ್ನು ತೆರೆಯದಂತೆ ಆದೇಶಿಸಲಾಗಿದೆ.
ನಿಯೋಜಿಸಿದ ಅಧಿಕಾರಿಗಳು ಹೊರತುಪಡಿಸಿ ಬದಲಿ ಅಧಿಕಾರಿಗಳನ್ನು ನಿಯೋಜಿಸಲು ಅವಕಾಶವಿರುವುದಿಲ್ಲ ಮತ್ತು ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ಎಲ್ಲ ಅಧಿಕಾರಿಗಳು ಹಾಜರಾಗಬೇಕು. ಪರೀಕ್ಷೆ ಕೊಠಡಿಯಲ್ಲಿ ಗಾಳಿ-ಬೆಳಕು ಇರುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಧರಿಸಿರಬೇಕು. ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವ ಮೂಲಕ ವ್ಯವಸ್ಥಿತ ಹಾಗೂ ಸುಗಮವಾಗಿ ಪರೀಕ್ಷೆಗಳು ನಡೆಯುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಕೆ. ಹೊಸಮನಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

