ವಿಜಯಪುರ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ಅವರು ಜೂ.೨೪ರಿಂದ ೨೬ರವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಜೂ.೨೪ರಂದು ಸಂಜೆ ೭ ಗಂಟೆಗೆ ವಿಜಯಪುರಕ್ಕೆ ಆಗಮಿಸಿ ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಜೂ.೨೫ರಂದು ಬೆಳಿಗ್ಗೆ ೧೧ ಗಂಟೆಗೆ ವಿಜಯಪುರದಿಂದ ಪ್ರಯಾಣ ಬೆಳೆಸಿ, ಮಧ್ಯಾಹ್ನ ೧೨ ಗಂಟೆಗೆ ಜತ್ತ ಮತ್ತು ಅಕ್ಕಲಕೋಟ ತಾಲೂಕುಗಳಲ್ಲಿ ಕನ್ನಡ ಶಿಕ್ಷಕರ ನೇಮಕವಾದ ಶಾಲೆಗಳಿಗೆ ಭೇಟಿ ನೀಡಿ, ತಾಲೂಕಿನ ಶಾಸಕರು, ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಕನ್ನಡಪರ ಹೋರಾಟಗಾರರು, ಶಿಕ್ಷಕರೊಂದಿಗೆ ಗಡಿ ಸಮಸ್ಯೆಗಳ ಸಮಾಲೊಚನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ೩ ಗಂಟೆಗೆ ಜತ್ತದಿಂದ ಹೊರಟು ೫-೩೦ಕ್ಕೆ ವಿಜಯಪುರಕ್ಕೆ ಆಗಮಿಸಿ ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಜೂ.೨೬ ರಂದು ಬೆಳಿಗ್ಗೆ ೮ ಗಂಟೆಗೆ ವಿಜಯಪುರದಿಂದ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ
Subscribe to Updates
Get the latest creative news from FooBar about art, design and business.
Related Posts
Add A Comment
