ಸಿಂದಗಿ: ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಪೇಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿದ್ದು ಎಲ್ಲ ಕ್ಷೇತ್ರಗಳ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ಮಾಜಿ ಶಾಸಕ ರಮೆಶ ಭೂಸನೂರ ಹೇಳಿದರು.
ಗುರುವಾರದಂದು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಗುರುವಾರ ರಸ್ತೆ ತಡೆದು, ಟಾಯರ್‌ಗೆ ಬೆಂಕಿ ಹಚ್ಚಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರ ದೊಡ್ಡ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಗ್ಯಾರಂಟಿಗಳಿAದ ರಾಜ್ಯದ ಅಭಿವೃದ್ದಿ ಕಾರ್ಯಗಳು ಕುಂಠಿತಗೊAಡಿವೆ. ೫ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದಕ್ಕಾಗಿ ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಏರಿಕೆ ಮಾಡುವ ಜೊತೆಗೆ ವಾಲ್ಮೀಕಿ ನಿಗಮದ ೧೭೫ಕೋಟಿ ರೂ. ಹಗರಣ ಮಾಡಿರುವುದನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಬಿಜೆಪಿ ಮಂಡಲ ತಾಲೂಕಾಧ್ಯಕ್ಷ ಸಂತೋಷ ಪಾಟೀಲ ಡಂಬಳ, ಅಶೋಕ ಅಲ್ಲಾಪೂರ, ಬಸವರಾಜ ಹೂಗಾರ, ಜೆಡಿಎಸ್ ತಾಲೂಕಾಧ್ಯಕ್ಷ ಎಮ್.ಎನ್.ಪಾಟೀಲ ಮಾತನಾಡಿ, ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಸಾರ್ವಜನಿಕರ ಯೋಗಕ್ಷೇಮದೆಡೆಗೆ ಗಮನ ಹರಿಸದೇ ಏಕಾಏಕಿಯಾಗಿ ಪೆಟ್ರೋಲ್ ೩ರೂ. ಡೀಸೆಲ್ ೩.೫೦ಪೈ. ಹೆಚ್ಚಿಗೆ ಮಾಡಿದೆ. ಇದರಿಂದ ಸಾರ್ವಜನಿಕರ ಸ್ಥಿತಿಯ ಮೇಲೆ ಬರೆ ಎಳದಂತಾಗಿದೆ. ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಂದ ಜನಸಾಮಾನ್ಯರ ದಾರಿ ತಪ್ಪಿಸಿ ಮೂಲಭೂತ ಅವಶ್ಯಕ ವಸ್ತುಗಳ ಬೆಲೆ ಏರಿಕೆ ಮಾಡಿರುವುದಕ್ಕೆ ಒಪ್ಪಲು ಸಾಧ್ಯವಿಲ್ಲ. ಸರ್ಕಾರದ ಈ ಕ್ರಮವು ಜನರ ನಂಬಿಕೆ ಮತ್ತು ಭಾವನೆಗಳ ಮೇಲೆ ದ್ರೋಹ ಮಾಡಿದಂತಾಗುತ್ತದೆ ಇದು ಒಂದು ದೊಡ್ಡ ವಂಚನೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಪೀರಪ್ಪ ಕೆರೂರ, ಪ್ರಕಾಶ ನಂದಿಕೋಲ, ಸಿದ್ದಲಿಂಗಯ್ಯ ಹಿರೇಮಠ, ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ಬಿ.ಎಚ್.ಬಿರಾದಾರ, ಸಿದ್ದಾರಾಮ ಆನಗೊಂಡ, ಎಮ್.ಎಸ್.ಮಠ, ಪ್ರಶಾಂತ ಕದ್ದರಕಿ, ಖಾಜು ಬಂಕಲಗಿ, ಶಂಕರ ಬಗಲಿ, ಶಿವಯೋಗಿ ಮೂಡಗಿ, ಅಶೋಕ ವಾರದ ಆಲಮೇಲ, ಮಲ್ಲಿಕಾರ್ಜುನ ಕುಂಬಾರ, ಅನುಸೂಯಾ ಪಾರಗೊಂಡ, ಶ್ರೀಶೈಲ ಚೆಳ್ಳಗಿ ಸೇರಿದಂತೆ ಅನೇಕರು ಇದ್ದರು.
ನಂತರ ಉಪ ತಹಶೀಲ್ದಾರ ರೋಡಗಿ ಅವರಿಗೆ ಮನವಿ ಸಲ್ಲಿಸಿದರು.
Subscribe to Updates
Get the latest creative news from FooBar about art, design and business.
ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ
Related Posts
Add A Comment

