ಕೆಂಭಾವಿ: ಪಟ್ಟಣದ ಶಾಸಕರ ಕಾರ್ಯಾಲಯದಲ್ಲಿ ಶನಿವಾರ ಬೆಳಗ್ಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳು ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಂಡು ವರದಿ ನೀಡುವಂತೆ ಖಡಕ್ ಸೂಚನೆ ನೀಡಿದರು.
ಸಾರ್ವಜನಿಕರು ಒಬ್ಬೊಬ್ಬರಾಗಿ ಭೇಟಿಯಾಗಿ ಹೇಳುತ್ತಿದ್ದ, ಅಹವಾಲುಗಳನ್ನು ಸಚಿವರು ಸಮಚಿತ್ತದಿಂದ ಆಲಿಸಿ, ಮತಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಮತ್ತು ಕುಂದು ಕೊರತೆಗಳ ಬಗ್ಗೆ ಚರ್ಚೆ ನಡೆಸಿ ವಿಳಂಬ ನೀತಿ ಅನುಸರಿಸುತ್ತಿರುವ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಮಹಿಳೆಯರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಬಂದು ತಮ್ಮ ಅಳಲನ್ನು ತೋಡಿಕೊಂಡ ದೃಶ್ಯ ಕಂಡು ಬಂದಿತು. ಇದೇ ವೇಳೆ ಗೃಹರಕ್ಷಕ ದಳದ ಸಿಬ್ಬಂದಿಗಳು ನೀಡಿದ ಮನವಿ ಪತ್ರವನ್ನು ಸ್ವೀಕರಿಸಿದರು.
ಪ್ರಮುಖರಾದ ಮಾಜಿ ಜಿಪಂ ಉಪಾಧ್ಯಕ್ಷೆ ಶಂಕ್ರಣ್ಣ ವಣಿಕ್ಯಾಳ, ಮಾಜಿ ಜಿಪಂ ಅಧ್ಯಕ್ಷೆ ಸಿದ್ದನಗೌಡ ಪೋಲೀಸ್ ಪಾಟೀಲ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಾಪುಗೌಡ ಪಾಟೀಲ್, ಬಸನಗೌಡ ಹೊಸಮನಿ ಯಾಳಗಿ, ಶಾಂತಗೌಡ ಪಾಟೀಲ ಮಾಲಹಳ್ಳಿ, ಸಂಜೀವರಾವ್ ಕುಲ್ಕರ್ಣಿ, ಮಹಿಪಾಲ ರೆಡ್ಡಿ ಡಿಗ್ಗಾವಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಚಿಂಚೋಳಿ, ರಹಿಮಾನ್ ಪಟೇಲ್ ಯಲಗೋಡ, ಸಾಹೇಬಲಾಲ್ ಆಂದೇಲಿ ಹಾಗೂ ಪುರಸಭೆ ಹಾಲಿ ಮತ್ತು ಮಾಜಿ ಸದಸ್ಯರು ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

