Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ-ಬೆಂಗಳೂರು ಮಧ್ಯೆ ವಂದೇ ಭಾರತ ರೈಲು ಆರಂಭಕ್ಕೆ ಆಗ್ರಹ
(ರಾಜ್ಯ ) ಜಿಲ್ಲೆ

ವಿಜಯಪುರ-ಬೆಂಗಳೂರು ಮಧ್ಯೆ ವಂದೇ ಭಾರತ ರೈಲು ಆರಂಭಕ್ಕೆ ಆಗ್ರಹ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಎಂಎಲ್ಸಿ ಸುನೀಲಗೌಡ ಪಾಟೀಲರಿಂದ ಸಂಸದ ಜಿಗಜಿಣಗಿ ಅವರಿಗೆ ಮತ್ತೊಂದು ಪತ್ರ

ವಿಜಯಪುರ: ವಿಜಯಪುರ ಮತ್ತು ಬೆಂಗಳೂರು ಮಧ್ಯೆ ವಂದೇ ಭಾರತ ರೈಲು ಸೇವೆ ಪ್ರಾರಂಭಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಅವರಿಗೆ ಮತ್ತೋಮ್ಮೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಸತತ 7ನೇ ಬಾರಿಗೆ ಸಂಸದರಾಗಿರುವ ರಮೇಶ ಜಿಗಜಿಣಗಿ ಅವರಿಗೆ 24.11.2023ರಂದು ಪತ್ರ ಬರೆದು ಈ ಕುರಿತು ಮನವಿ ಮಾಡಿದ್ದೆ. ಆದರೆ, ಅವರು ಸ್ಪಂದಿಸಲಿಲ್ಲ. ಆದರೂ, ಜಿಲ್ಲೆಯ ಮತದಾರರು ತಮ್ಮನ್ನು ಪುನರಾಯ್ಕೆ ಮಾಡಿದ್ದಾರೆ. ತಮ್ಮ ಪರ ಮತ ಹಾಕಿರುವ ಮತದಾರರ ಋಣ ತೀರಿಸುವ ಸಲುವಾಗಿಯಾದರೂ ಸಂಸದರು ವಂದೇ ಭಾರತ ರೈಲು ಸೇವೆ ಪ್ರಾರಂಭಿಸಲು ಶ್ರಮಿಸಬೇಕು. ಈಗಾಗಲೇ ನಮ್ಮ ನೆರೆಯ ಜಿಲ್ಲೆಗಳಾದ ಕಲಬುರಗಿ, ಬೆಳಗಾವಿ, ಧಾರವಾಡ ಸೇರಿದಂತೆ ಎಲ್ಲ ಜಿಲ್ಲೆಗಳಿಂದ ಈ ರೈಲು ಸೇವೆ ಲಭ್ಯವಿದೆ. ಆದರೆ, ಅಖಂಡ ವಿಜಯಪುರ ಜಿಲ್ಲೆಯಿಂದ ಇನ್ನೂ ವಂದೇ ಭಾರತ ರೈಲು ಪ್ರಾರಂಭವಾಗಿಲ್ಲ. ಅಭಿವೃದ್ಧಿ ವಿಚಾರದಲ್ಲಿ ಉಭಯ ಜಿಲ್ಲೆಗಳ ಜನರಿಂದ ಸಾಕಷ್ಟು ಬೇಡಿಕೆ ಬರುತ್ತಿದ್ದರೂ ನೀವು ಕಣ್ಮುಚ್ಚಿ ಕುಳಿತಿರುವಂತಿದೆ. ಸಂಸತ್ತಿನಲ್ಲಿ ಒಂದೂ ಪ್ರಶ್ನೆಯನ್ನು ಕೇಳದ ತಾವುಗಳು ಈ ರೈಲು ಸೇವೆ ಪ್ರಾರಂಭಿಸಲು ಕ್ರಮ ಕೈಗೊಂಡರೆ ಉಭಯ ಜಿಲ್ಲೆಗಳಲ್ಲಿ ತಮ್ಮ ಹೆಸರು ಚಿರಸ್ಥಾಯಿಯಾಗಿ ಉಳಿಯಲಿದೆ. ಈ ರೈಲು ಸೇವೆ ಪ್ರಾರಂಭವಾದ ತಕ್ಷಣ ಸಂಸದರಾದ ರಮೇಶ ಜಿಗಜಿಣಗಿ ಅವರನ್ನು ವಿಜಯಪುರ ಜಿಲ್ಲೆಯ ಜನರ ಪರವಾಗಿ ನಾಗರಿಕ ಸನ್ಮಾನ ಮಾಡಲಾಗುವುದು ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಈಗ ವಿಜಯಪುರದಿಂದ ಬೆಂಗಳೂರಿಗೆ ಹೋಗಲು ರೈಲು ಸೇವೆ ಇದ್ದರೂ ಈ ರೈಲುಗಳು ಸರಿಯಾದ ಸಮಯಕ್ಕೆ ನಿಗದಿತ ಸ್ಥಳಗಳನ್ನು ತಲುಪಲಾಗುತ್ತಿಲ್ಲ. ಬೆಂಗಳೂರಿಗೆ ಜಿಲ್ಲೆಯ ಜನರು ದಿನನಿತ್ಯದ ವ್ಯವಹಾರ ಸಂಬAಧಿ ಮತ್ತು ಸರಕಾರಿ ಕಚೇರಿ ಕೆಲಸಗಳಿಗಾಗಿ ಬೆಂಗಳೂರಿಗೆ ಹೋಗಿ- ಬರುವ ಜನರಿಗೆ ತೊಂದರೆಯಾಗಿದೆ. ಅಲ್ಲದೇ, ಬೆಂಗಳೂರಿನಿಂದ ವಿಜಯಪುರಕ್ಕೆ ಬರುವ ರೈಲುಗಳ ಸಂಚಾರ ಸಮಯವೂ ಸಹ ಹೆಚ್ಚಾಗಿದೆ. ವಿಜಯಪುರ ಜಿಲ್ಲೆಯಿಂದ ಸಾಕಷ್ಟು ಜನ ಯುವಕರು ಉದ್ಯೋಗ ಅರಸಿ ಬೆಂಗಳೂರಿನಲ್ಲಿ ನೆಲಸಿರುತ್ತಾರೆ. ಹಬ್ಬಗಳು ಮತ್ತು ಸಾಲುಸಾಲು ರಜೆಗಳು ಇರುವ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವುದರಿಂದ ಖಾಸಗಿ ಸಾರಿಗೆ ಸಂಸ್ಥೆಗಳು ಪ್ರಯಾಣ ದರವನ್ನು ಎರಡರಿಂದ ಮೂರು ಪಟ್ಟು ಹೆಚ್ಚಳ ಮಾಡುತ್ತಾರೆ. ಇದರಿಂದ ಬೆಂಗಳೂರಿನಲ್ಲಿ ಕೆಲಸ ಮಾಡುವ ಯುವಕರು, ಕಾರ್ಮಿಕರು ಮತ್ತು ಇತರೆ ಸಾರ್ವಜನಿಕರಿಗೆ ತುಂಬಾ ಹೊರೆಯಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಇದರ ಜೊತೆಗೆ ಮಹಾರಾಷ್ಟ್ರದ ಮುಂಬೈನಿಂದ ಸೋಲಾಪುರ ವರೆಗೆ ಸಂಚರಿಸುವ ವಂದೇ ಭಾರತ ರೈಲು ಸೇವೆಯನ್ನು ವಿಜಯಪುರ ವರೆಗೆ ವಿಸ್ತರಿಸಬೇಕು. ಇದರಿಂದ ತಮ್ಮ ಕೆಲಸ ಕಾರ್ಯಗಳಿಗಾಗಿ ಸೋಲಾಪುರ, ಪುಣೆ ಮತ್ತು ಮುಂಬೈಗೆ ಸಂಚರಿಸುವ ಜಿಲ್ಲೆಯ ಜನರಿಗೆ ಅನಕೂಲವಾಗಲಿದೆ.
ಈ ರೈಲು ಸೇವೆ ಪ್ರಾರಂಭಕ್ಕೆ ಕ್ರಮ ಕೈಗೊಂಡರೆ, ಈ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದೆ. ವ್ಯಾಪಾರ ವಹಿವಾಟಿಗೂ ಸಾಕಷ್ಟು ಪ್ರೋತ್ಸಾಹ ಸಿಗಲಿದೆ. ಅಲ್ಲದೇ, ಈ ಭಾಗದಲ್ಲಿ ಆರ್ಥಿಕ ಅಭಿವೃದ್ಧಿಯೂ ಆಗಲಿದೆ. ಈಗಲಾದರೂ ತಾವು ಎಚ್ಚೆತ್ತುಕೊಂಡು ಅರಣ್ಯರೋಧನವಾಗಿರುವ ಈ ಭಾಗದ ಜನರ ಬಹುದಿನಗಳ ಬೇಡಿಕೆಯನ್ನು ಈಡೇರಿಸಬೇಕು. ಇಲ್ಲದಿದ್ದರೆ, ತಮಗೆ ಮತಹಾಕಿ ಮತ್ತೆ ಅಧಿಕಾರ ನೀಡಿರುವ ಮತದಾರರನ್ನು ಕೇವಲ ಮತಗಳಿಕೆಗಷ್ಟೇ ಸೀಮಿತಗೊಳಿಸಿದಂತಾಗುತ್ತದೆ. ಆದ್ದರಿಂದ ಈ ನಿಟ್ಟಿನಲ್ಲಿ ಕೂಡಲೇ ಕಾರ್ಯೋನ್ಮುಖರಾಗುವಂತೆ ಸಂಸದ ರಮೇಶ ಜಿಗಜಿಣಗಿ ಅವರಲ್ಲಿ ಕಳಕಳಿಯ ಮನವಿ ಮಾಡುವುದಾಗಿ ವಿಧಾನ ಪರಿಷತ ಶಾಸಕರು ಜೂ. 18 ರಂದು ಪತ್ರ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.