ವಿಜಯಪುರ: ಯೋಗವು ಮನುಷ್ಯನ ದೈಹಿಕ ಮತ್ತು ಮಾನಸಿಕ ಸ್ವಾಸ್ತ್ಯಕ್ಕೆ ಸಂಜೀವಿನಿ ಇದ್ದಂತೆ ಎಂದು ಯೋಗಪಟು ಶೀಫಾಆರಾ ಎನ್. ಅಕ್ಕಲಕೋಟ ಹೇಳಿದ್ದಾರೆ.
ನಗರದ ಬಿ.ಎಲ್.ಡಿ.ಈ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ್ ಸಿ.ಬಿ.ಎಸ್.ಇ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಎಲ್ಲರೂ ಪ್ರತಿದಿನ ಯೋಗವನ್ನು ಮಾಡುವುದರಿಂದ ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬಹುದು. ಇದರಿಂದ ದಿನವಿಡೀ ಕ್ರಿಯಾಶೀಲರಾಗಿ ಇರಲು ಸಾಧ್ಯ ಎಂದು ಅವರು ಹೇಳಿದರು.
ಶಾಲಾ ಮೈದಾನದಲ್ಲಿ ಸೇರಿದ್ದ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಾಮೂಹಿಕವಾಗಿ ಯೋಗದಲ್ಲಿ ಪಾಲ್ಗೊಂಡರು. ಹಲವಾರು ವಿದ್ಯಾರ್ಥಿಗಳು ಯೋಗದ ನಾನಾ ಭಂಗಿಗಳನ್ನು ಪ್ರದರ್ಶಿಸುವ ಮೂಲಕ ಗಮನ ಸೆಳೆದರು.
ಈ ಸಂದರ್ಭದಲ್ಲಿ ಯೋಗ ತರಬೇತುದಾರ ಪರಶುರಾಮ ರಾಯಬಾಗಿ ಅವರನ್ನು ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಶೈಜೂಕ ಕೆ. ಆರ್. ನಾಯರ, ಹಿರಿಯ ಕಾರ್ಯಸಂಯೋಜಕಿ ದೀಪಾ ಜಂಬೂರೆ ಮತ್ತು ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

