ಮೋರಟಗಿ: ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಜೂ. ೨೩ ರವಿವಾರ ಬೆಳಿಗ್ಗೆ ೧೧ ಗಂಟೆಗೆ ಜರುಗಲಿದ್ದು ಜವಳಿ ಕಬ್ಬು ಅಭಿವೃದ್ಧಿ ಸಕ್ಕರೆ ಸಚಿವರು ಹಾಗೂ ವ್ಹಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚಿವ ಶಿವಾನಂದ ಪಾಟೀಲ್ ಉದ್ಘಾಟನಾ ಸಮಾರಂಭವನ್ನು ನೆರವೇರಿಸಲಿದ್ದಾರೆ.
ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಕಾರ್ಯಕ್ರಮದಲ್ಲಿ ಸಿದ್ದಲಿಂಗ ಮಹಾಸ್ವಾಮಿಗಳು ವಿರಾಕ್ತಮಠ ನೆಲೋಗಿ ಪಾವನ ಸಾನಿಧ್ಯ ವಹಿಸಲಿದ್ದಾರೆ, ಸಿಂದಗಿ ಶಾಸಕ ಅಶೋಕ್ ಮನಗೂಳಿ, ಆಫಜಲಪುರ ಶಾಸಕ ಎಂ ವಾಯ್ ಪಾಟೀಲ್, ಜೇವರ್ಗಿ ಶಾಸಕ ಡಾ, ಅಜಯಸಿಂಗ, ಕಲಬುರ್ಗಿ ಶಾಸಕ ಅಲ್ಲಮಪ್ರಭು ಪಾಟೀಲ್, ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದು, ಕಾರಣ ಮೋರಟಗಿ ಸೇರಿದಂತೆ ಸುತ್ತಲಿನ ಗ್ರಾಮದ ರೈತರು ಸಾರ್ವಜನಿಕರು ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ಪಿಕೆಪಿಎಸ್ ಅಧ್ಯಕ್ಷ ವೀರನಗೌಡ ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

