Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವೈದ್ಯರು & ಅರೇ ವೈದ್ಯಕೀಯ ಹುದ್ದೆ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ

ನಾವೆಲ್ಲರೂ ಸೇರಿ ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸೋಣ

ಪಾಲಕರೆ ನಿಮ್ಮಮಕ್ಕಳಿಗೆ ಹೆದರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶೈಕ್ಷಣಿಕ ಅಡಿಪಾಯ ಗಟ್ಟಿಯಾಗಿದ್ದರೆ ಸಂಸ್ಥೆ ಸದೃಢವಾಗಿ ಮುನ್ನಡೆಯಲು ಸಾಧ್ಯ
(ರಾಜ್ಯ ) ಜಿಲ್ಲೆ

ಶೈಕ್ಷಣಿಕ ಅಡಿಪಾಯ ಗಟ್ಟಿಯಾಗಿದ್ದರೆ ಸಂಸ್ಥೆ ಸದೃಢವಾಗಿ ಮುನ್ನಡೆಯಲು ಸಾಧ್ಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಳತ್ತ ಗಮನ ಹರಿಸದೇ ರೋಗಿಗಳೊಂದಿಗೆ ಹೆಚ್ಚಿನ ಸಮಯ ಕಳೆದರೆ ಅದರ ಅನುಭವದ ಮೇಲೆ ಉತ್ತಮ ಚಿಕಿತ್ಸೆ ಪಡೆಯಲು ಸಾಧ್ಯ ಎಂದು ಬೆಳಗಾವಿಯ ಕಾಹೆರ್ ನ ಜೆ ಎನ್. ಮೆಡಿಕಲ್ ಕಾಲೇಜಿನ ಪ್ರಿನ್ಸಿಪಾಲ್ ಡಾ. ಎನ್. ಎಸ್. ಮಹಾಂತಶೆಟ್ಟಿ ಹೇಳಿದ್ದಾರೆ.

ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಚಿಕ್ಕ ಮಕ್ಕಳ ವಿಭಾಗ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಎರಡು ದಿನಗಳ ಬಿ-ಐಟಿಇಸ್- 2023 ಎ ಪಿಡಿಯಾಟ್ರಿಕ್ ಪ್ರ್ಯಾಕ್ಟಿಕಲ್ ಕ್ರ್ಯಾಶ್ ಕೋರ್ಸ್ ಉದ್ಘಾಟಿಸಿ ಮಾತನಾಡಿದರು.

ಸ್ನಾತಕೋತ್ತರ ವಿದ್ಯಾರ್ಥಿಗಳು ವೈದ್ಯಕೀಯ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆಗಳ ಕುರಿತು ಪ್ರತಿನಿತ್ಯ ಗಮನ ಹರಿಸಬೇಕು. ಕೇವಲ ಪರೀಕ್ಷೆಗಳ ಬಗ್ಗೆ ಗಮನ ಹರಿಸದೇ ರೋಗಿಗಳ ಜೊತೆ ಸಂವಹನ, ರೋಗಗಳ ಸಂಶೋಧನೆ, ಕಾಯಿಲೆಗಳನ್ನು ದೃಢೀಕರಿಸುವುದರ ಕಡೆಗೂ ಗಮನ ಹರಿಸಬೇಕು. ರೋಗಿಗಳೊಂದಿಗೆ ಹೆಚ್ಚಿನ ಸಮಯ ಕಳೆಯುವುದರಿಂದ ಸಿಗುವ ಅನುಭವ ಉತ್ತಮ ವೈದ್ಯರಾಗಲು ನೆರವಾಗುತ್ತದೆ. ಲಭ್ಯ ದತ್ತಾಂಶಗಳನ್ನು ವಿಶ್ಲೇಷಣೆ ಮಾಡುವುದು, ನಿರ್ದಿಷ್ಠ ಪ್ರಕರಣಗಳ ಕೂಲಂಕಷ ಅಧ್ಯಯನ ಮುಖ್ಯವಾಗಿದೆ. ರೋಗಗಳಿಗೆ ಮೂಲಭೂತ ಕಾರಣಗಳ ಬಗ್ಗೆ ತಿಳಿದುೊಂಡರೆ ಶೇ. 50 ರಷ್ಟು ಕೆಲಸ ಮೂಗಿಸಿದಂತೆ. ಇತ್ತೀಚಿನ ದಿನಗಳಲ್ಲಿ ಮಕ್ಕಳು ನಿದ್ದೆಯಲ್ಲಿ ಮೂತ್ರ ವಿಸರ್ಜನೆ ಮಾಡುವ ಸಮಸ್ಯೆಯನ್ನು ಹೇಗೆ ನಿರ್ವಹಣೆ ಮಾಡಬೇಕು ಎಂಬುದು ಬಹಳ ಜನರಿಗೆ ಮಾಹಿತಿಯ ಕೊರತೆ ಇದೆ. ಈ ನಿಟ್ಟಿನಲ್ಲಿ ತರಬೇತಿ ಕಾರ್ಯಕ್ರಮಗಳಿಂದ ಯುವ ವೈದ್ಯರಿಗೆ ಇಂಥ ಸಮಸ್ಯೆಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.

ವಿವಿಯ ಉಪಕುಲಪತಿ ಡಾ. ಆರ್. ಎಸ್. ಮುಧೋಳ ಮಾತನಾಡಿ, ದೇಶದ ಭವಿಷ್ಯದ ಶೇ. 40ರಷ್ಟು ನಾಗರಿಕರ ಭವಿಷ್ಯ ಚಿಕ್ಕಮಕ್ಕಳ ತಜ್ಞರ ಕೈಯ್ಯಲ್ಲಿದೆ. ಶೈಕ್ಷಣಿಕ ಅಡಿಪಾಯ ಗಟ್ಟಿಯಾಗಿದ್ದರೆ ಆಯಾ ಸಂಸ್ಥೆಗಳು ಸದೃಢವಾಗಿ ಮುನ್ನಡೆಯಲು ಸಾಧ್ಯ. ವಿದ್ಯಾರ್ಥಿಗಳಿಗೆ ಬೋಧನೆಯ ಜೊತೆಗೆ ಪ್ರಯೋಗಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಿದರೆ ವೃತ್ತಿ ಕೌಶಲ್ಯ ಹೆಚ್ಚಿಸಬಹುದಾಗಿದೆ. ಸಾಮಾಜಿಕ ಜಾಲತಾಣಗಳಿಂದ ರೋಗಗಳ ಪತ್ತೆಯ ಬಗ್ಗೆ ಮಾಹಿತಿ ಸಿಗುತ್ತದೆ. ಆದರೆ, ಪ್ರಯೋಗಗಳ ಫಲಿತಾಂಶಗಳಿಂದ ಉತ್ತಮ ಚಿಕಿತ್ಸೆ ನೀಡಲು ನೆರವಾಗುತ್ತದೆ. ಶ್ರಮಪಟ್ಟು ಅಧ್ಯಯನ ಮಾಡಿದರೆ ಫಲಿತಾಂಶ ಫಲಪ್ರದವಾಗಿರುತ್ತದೆ. 36 ವರ್ಷಗಳ ಇತಿಹಾಸ ಹೊಂದಿರುವ ಬಿ.ಎಲ್.ಡಿ.ಇ ವೈದ್ಯಕೀಯ ಆಸ್ಪತ್ರೆ ಮತ್ತು ಕಾಲೇಜು ಇಂದು ಬದಲಾಗುತ್ತಿರುವ ಅಗತ್ಯಗಳಿಗೆ ಅನುಗುಣವಾಗಿ ನಿರಂತರವಾಗಿ ವೈದ್ಯಕೀಯ ಶಿಕ್ಷಣ ನೀಡುತ್ತಿದೆ. ನಮ್ಮಲ್ಲಿ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯಗಳಿವೆ, ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಸಕಲ ಸೌಲಭ್ಯಗಳಿವೆ ಎಂದು ಹೇಳಿದರು.

ವಿವಿಯ ಡೀನ್ ಡಾ. ಎಸ್. ವಿ. ಪಾಟೀಲ ಮಾತನಾಡಿ, ಚಿಕ್ಕಮಕ್ಕಳ ವಿಭಾಗದಿಂದ ಈವರೆಗೆ 127 ವೈದ್ಯಕೀಯ ಲೇಖನಗಳು ಪ್ರಕಟವಾಗಿದ್ದು, ಅವುಗಳಲ್ಲಿ ಕಳೆದ ಮೂರು ವರ್ಷಗಳಲ್ಲಿ 97 ಲೇಖನಗಳು ನಾನಾ ನಿಯತಕಾಲಿಕೆಗಳಲ್ಲಿ ಪ್ರಟಕವಾಗಿರುವುದು ಗಮನಾರ್ಹವಾಗಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ಮತ್ತು ನೆರೆಯ ರಾಜ್ಯಗಳಿಂದ 70ಕ್ಕೂ ಹೆಚ್ಚು ಸ್ನಾತಕೋತ್ತರ ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಂಗವಾಗಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು.

ಚೆನ್ನೈನ ಶ್ರೀ ರಾಮಚಂದ್ರ ಹೈಯರ್ ಎಜುಕೇಶನ್ ಆ್ಯಂಡ್ ರಿಸರ್ಚ್(ಶ್ರೀಹೆರ್) ಮೆಡಿಕಲ್ ಕಾಲೇಜು ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಚೆನ್ನೈನ ಡಾ. ರಾಮಚಂದ್ರ, ಡಾ. ಪದ್ಮಸಾನಿ, ಡಾ. ರಾಜಕುಮಾರ ಪಿ, ಡಾ. ಅರುಂಧತಿ ಪಾಟೀಲ, ಬಿ.ಎಲ್.ಡಿ.ಇ ಡೀಮ್ಮಡ್ ವಿವಿಯ ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ, ಮೆಡಿಕಲ್ ಸುಪರಿಂಟೆಂಡೆಂಟ್ ಡಾ. ರಾಜೇಶ ಹೊನ್ನುಟಗಿ, ಉಪಪ್ರಾಚಾರ್ಯ ಡಾ. ಎಂ. ಬಿ. ಪಾಟೀಲ, ಚಿಕ್ಕಮಕ್ಕಳ ತಜ್ಞರಾದ ಡಾ. ಎಂ. ಎಂ. ಪಾಟೀಲ, ಸಮಉಪಕುಲಪತಿ ಡಾ. ಅರುಣ ಚಂ. ಇನಾಮದಾರ ಮುಂತಾದವರು ಉಪಸ್ಥಿತರಿದ್ದರು.
ಚಿಕ್ಕಮಕ್ಕಳ ತಜ್ಞರ ವಿಭಾಗದ ಮುಖ್ಯಸ್ಥ ಡಾ. ಎಸ್. ಎಸ್. ಕಲ್ಯಾಣಶೆಟ್ಟರ ಸ್ವಾಗತಿಸಿದರು. ಡಾ. ಸಿದ್ದು ಚರ್ಕಿ ಮತ್ತು ಡಾ. ವಿಜಯಲಕ್ಷ್ಮಿ ಬೂದಿಹಾಳ ನಿರೂಪಿಸಿದರು. ಡಾ. ತಿರುಮಲ ಕುರಕರ್ಣಿ ವಂದಿಸಿದರು.

BIJAPUR NEWS bldea public public news udayarashminews.com
Share. Facebook Twitter Pinterest Email Telegram WhatsApp
  • Website

Related Posts

ವೈದ್ಯರು & ಅರೇ ವೈದ್ಯಕೀಯ ಹುದ್ದೆ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ

ನಾವೆಲ್ಲರೂ ಸೇರಿ ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸೋಣ

ಪಾಲಕರೆ ನಿಮ್ಮಮಕ್ಕಳಿಗೆ ಹೆದರಿ

ಈರುಳ್ಳಿ, ಹತ್ತಿ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆಗೆ ಆಗ್ರಹಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವೈದ್ಯರು & ಅರೇ ವೈದ್ಯಕೀಯ ಹುದ್ದೆ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಾವೆಲ್ಲರೂ ಸೇರಿ ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸೋಣ
    In (ರಾಜ್ಯ ) ಜಿಲ್ಲೆ
  • ಪಾಲಕರೆ ನಿಮ್ಮಮಕ್ಕಳಿಗೆ ಹೆದರಿ
    In ವಿಶೇಷ ಲೇಖನ
  • ಈರುಳ್ಳಿ, ಹತ್ತಿ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಕ್ರೀಡೆಯಲ್ಲಿ ಮಕ್ಕಳ ಆರೋಗ್ಯ ಅಡಗಿದೆ :ಎಸ್.ಕೆ.ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಮೆಡಿಕಲ್ ಕಾಲೇಜ್ ಹೋರಾಟ: ಡಿ.೧ ರಂದು ಬೃಹತ್ ಹೋರಾಟಕ್ಕೆ ಕರೆ
    In (ರಾಜ್ಯ ) ಜಿಲ್ಲೆ
  • ಹಿರಿಯರನ್ನು ಗೌರವಿಸುವುದು ಯುವಪೀಳಿಗೆ ಜವಾಬ್ದಾರಿ :ಪ್ರೊ.ಹಿರೇಮಠ
    In (ರಾಜ್ಯ ) ಜಿಲ್ಲೆ
  • ಡಾ.ಸರೋಜನಿ ಮಹಿಷಿ ವರದಿ ಜಾರಿಗೆ ಕದಂಬ ಸೈನ್ಯ ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿದೇಶಕ್ಕೆ ಹೊರಟ ಗ್ರಾಮೀಣ ಪ್ರತಿಭೆ ಪ್ರೀತಿ ಆನೆಗುಂದಿ
    In (ರಾಜ್ಯ ) ಜಿಲ್ಲೆ
  • ನಬಿರೋಶನ್ ಪ್ರಕಾಶನದಿಂದ ಮಹಾಂತೇಶ ಅವರಿಗೆ ನುಡಿ ನಮನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.