ವಿಜಯಪುರ: ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕೇಂದ್ರ ವತಿಯಿಂದ ಜೂನ್ 26 ರಂದು ಬುಧವಾರ ಚಡಚಣದಲ್ಲಿ ಉಚಿತ ಆರೋಗ್ಶ ತಪಾಸಣೆ ಶಿಬಿರ ನಡೆಯಲಿದೆ.
ಚಡಚಣ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿರುವ ಈ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ನುರಿತ ತಜ್ಞರಿಂದ ಹೃದಯ ಸಂಬಂಧಿತ ಕಾಯಿಲೆಗಳು, ಮೂತ್ರ ಜನಕಾಂಗ ಮತ್ತು ನರರೋಗ ತಪಾಸಣೆ ಮಾಡಲಾಗುವುದು. ಈ ಉಚಿತ ಶಿಬಿರದಲ್ಲಿ ಸಕ್ಕರೆ ಕಾಯಿಲೆ ಪರೀಕ್ಷೆ, ಇಸಿಜಿ, ರಕ್ತದೊತ್ತಡ ಉಚಿತ ತಪಾಸಣೆ ನಡೆಸಲಾಗುವುದು. ಅಲ್ಲದೇ, ನುರಿತ ವೈದ್ಯರಿಂದ ಆಪ್ತಸಮಾಲೋಚನೆ ಕೂಡ ಇರುತ್ತದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಇದರ ಪ್ರಯೋಜನವನ್ನು ಪಡೆಯಬೇಕು ಎಂದು ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪಗೋಳ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ- 8951178777 ಮತ್ತು 6366786004 ಸಂಪರ್ಕಿಸಬಹುದಾಗಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
