ವಿಜಯಪುರ: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವ ವಿದ್ಯಾಲಯದ ಯೋಗ ಮತ್ತು ವ್ಯಾಯಾಮ ವಿಜ್ಞಾನ ಕೇಂದ್ರ, ಶರೀರ ರಚನಾಶಾಸ್ತ್ರ ಮತ್ತು ಐಕ್ಯೂಎಸಿ, ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರ ಹಾಗೂ ನವದೆಹಲಿಯ ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ನಗದರಲ್ಲಿ ಶುಕ್ರವಾರ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು
ವಿವಿಯ ಗ್ರಂಥಾಲಯ ಕಟ್ಟಡ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕುಲಪತಿ ಡಾ. ಆರ್. ಎಸ್. ಮುಧೋಳ ಉದ್ಘಾಟಿಸಿದರು.
ಡಾ. ಶ್ರೀಲಕ್ಷ್ಮಿ ಬಗಲಿ ಮಾತನಾಡಿ, ಯೋಗದ ಇತಿಹಾಸ, ಅದರಲ್ಲಿಯ ಸಂಶೋಧನೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಬ್ಯಾಂಕಾಕ್ ಮತ್ತು ದುಬೈನಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿವಿಯ ಯೋಗ ಶಿಕ್ಷಕ ಎಂ. ಪಿ. ದೊಡ್ಡಮನಿ ಅವರನ್ನು ಸನ್ಮಾನಿಸಲಾಯಿತು. ಅಲ್ಲದೇ, ಯೋಗ ಸರ್ಟಿಫಿಕೇಟ್ ಕೋರ್ಸುಗಳನ್ನು ಪಾಸಾದ ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ವಿತರಿಸಲಾಯಿತು.
ಎಂ. ಪಿ. ದೊಡಮನಿ ಮತ್ತು ಅವರ ತಂಡದ ಸದಸ್ಯರಾದ ಡಾ. ಶಿವಲೀಲಾ ದೇವರಮನಿ, ವೈದ್ಯಕೀಯ ವಿದ್ಯಾರ್ಥಿಗಳಾದ ಪ್ರಿಯಾಂಕಾ, ಮೇಘನಾ ಅವರು ಪ್ರಾಣಾಯಾಮ, ಧ್ಯಾನ, ಸಂಕಲ್ಪದ ಕುರಿತು ಪ್ರದರ್ಶನ ಮತ್ತು ತರಬೇತಿ ನೀಡಿದರು.
ಈ ಸಂದರ್ಭದಲ್ಲಿ ವಿವಿಯ ನಾನಾ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಉಪನ್ಯಾಸಕರು, ಬೋಧಕ, ಬೋಧಕರ ಹೊರತಾದ ಸಿಬ್ಬಂದಿ, ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 100ಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು.
ಈ ಕಾರ್ಯಕ್ರಮವನ್ನು ಡಾ. ಜ್ಯೋತಿ ಖೋದ್ನಾಪುರ ಉಸ್ತುವಾರಿಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳಾದ ಅರುಷಿ ಮತ್ತು ರಿಶಿತ ಸಹಸಂಯೋಜಕರಾಗಿ ಸಂಘಟಿಸಿದರು.
ವೈದ್ಯಕೀಯ ವಿದ್ಯಾರ್ಥಿನಿ ಭಾಮಿನಿ ಸ್ವಾಗತ ಗೀತೆ ಹಾಡಿದರು. ಡಾ. ಶ್ರೀಲಕ್ಷ್ಮಿ ಬಗಲಿ ಸ್ವಾಗತಿಸಿದರು. ಡಾ.ಲತಾ ಮುಳ್ಳೂರ ವಂದಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

