ನಿಡಗುಂದಿ: ಮುಂಗಾರು ಮಳೆ ಆರಂಭಗೊಂಡಿದ್ದು ನಾನಾ ಕಡೆ ಮಳೆ ನೀರು ನಿಂತು ಸೊಳ್ಳೆಗಳ ಸಂತತಿ ಹೆಚ್ಚಲಿದೆ, ಹೀಗಾಗಿ ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸುವ ಉದ್ದೇಶದಿಂದ ಶಿಕ್ಷಕರಿಗೆ ತರಬೇತಿ ನೀಡಲಾಗುತ್ತಿದೆ ಎಂದು ವೈದ್ಯ ಡಾ.ಸತೀಶ ಮಧಬಾವಿ ಹೇಳಿದರು.
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಾಲ್ಲೂಕಿನ ಪ್ರತಿ ಶಾಲೆಯ ಒಬ್ಬೊಬ್ಬ ಶಿಕ್ಷಕರಿಗೆ ಮಲೇರಿಯಾ ಮಾಸಾಚರಣೆ ನಿಮಿತ್ತ ಸೋಮವಾರ ಏರ್ಪಡಿಸಿದ್ದ ತರಬೇತಿಯಲ್ಲಿ ಮಾತನಾಡಿದರು.
ಜೂನ್ ತಿಂಗಳಲ್ಲಿ ಮಳೆ
ಆರಂಭವಾಗಿರುವದರಿಂದ ಸೊಳ್ಳೆಗಳ
ಉತ್ಪಾದನೆ ಹೆಚ್ಚಾಗಿ ಡೆಂಗಿ ರೋಗ
ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ.
ಸೊಳ್ಳೆಗಳನ್ನು ನಾಶಮಾಡಲು
ಕೀಟನಾಶಕ ಸಿಂಪಡಿಸಿ ದಿನನಿತ್ಯ ಸೊಳ್ಳೆ ಪರದೆಯನ್ನು ಉಪಯೋಗಿಸುವುದರಿಂದ ಮಾರಕ ರೋಗಗಳಿಂದ ರಕ್ಷಣೆ ಪಡೆಯಬಹುದಾಗಿದೆ. ಈ
ನಿಟ್ಟಿನಲ್ಲಿ ತಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಜಾಗೃತಿ
ಮೂಡಿಸುವುದು ಅಗತ್ಯವಾಗಿದೆ ಎಂದರು.
ನೀರು ಶೇಖರಣೆಯಾಗುವ
ತೊಟ್ಟಿಗಳನ್ನು ವಾರಕ್ಕೊಮ್ಮೆ
ಶುಚಿಗೊಳಿಸಲು ಕ್ರಮವಹಿಸಬೇಕು.
ನಿರುಪಯುಕ್ತ ಘನತ್ಯಾಜ್ಯ ವಸ್ತುಗಳಲ್ಲಿ
ನೀರು ಸಂಗ್ರಹವಾಗದಂತೆ
ನೋಡಿಕೊಳ್ಳುವುದರ ಜೊತೆಗೆ
ಶೀಘ್ರ ಹಾಗೂ ಸೂಕ್ತ ವಿಲೇವಾರಿಗೆ
ಕ್ರಮವಹಿಸಲು ತಿಳಿಸಿದರು. ಆರೋಗ್ಯ ಶಿಕ್ಷಣಾಧಿಕಾರಿ ಆರ್.ಬಿ. ಮಾಶೆಟ್ಟಿ ಮಾತನಾಡಿ ಡೆಂಗಿ ಜ್ವರವು ವೈರಸ್‌ನಿಂದ ಉಂಟಾಗುವ ಕಾಯಿಲೆ ಇದು ಸೊಂಕು ಹೊಂದಿದ ಈಡಿಸ್ ಇಜಿಪ್ಟ್ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ ಈ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತವೆ,
ಇದ್ದಕ್ಕಿದ್ದಂತೆ ತೀವ್ರ ಜ್ವರ ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗದಲ್ಲಿ ವಿಪರೀತ ನೋವು, ಹೊಟ್ಟೆ ನೋವು ಕಾಣಿಸಿಕೊಳ್ಳುವುದು.
ಬಾಯಿ, ಮೂಗು ಮತ್ತು ಒಸಡುಗಳಿಂದ ರಕ್ತಸ್ರಾವ ಹಾಗೂ ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವ ಕಾಣಿಸಿಕೊಳ್ಳಬಹುದು ಎಂದರು.
ಆರೋಗ್ಯ ಕಾರ್ಯಕರ್ತರು ಆಶಾ, ಅಂಗನವಾಡಿ ಕಾರ್ಯಕರ್ತರುಲಾರ್ವಾ ಸರ್ವೆಗೆ ಮನೆ ಮನೆಗೆ ಬಂದಾಗ ಸಹಕರಿಸಿ ಎಂದು ನುಡಿದರು.
ಜಗದೀಶ ಮುಚ್ಚಂಡಿ, ಗಿರೀಶ ಹೂಗಾರ, ಕಂಟೆಪ್ಪ ಮುರಾಳ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

