ಸಿಂದಗಿ: ಸರಕಾರಿ ಶಾಲೆಗಳಲ್ಲಿ ಊಟ, ಸಮವಸ್ತ್ರ ಹಾಗೂ ಕಲಿಕಾ ಸಾಮಾಗ್ರಿಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಸರ್ಕಾರ ೬-೧೪ ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಉಚಿತ ಕಡ್ಡಾಯ ಶಿಕ್ಷಣ ಜಾರಿಗೆ ತಂದಿದೆ. ಅದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಸಂಸ್ಥೆಯ ನಿರ್ದೇಶಕ ಫಾ.ಸಂತೋಷ ಹೇಳಿದರು.
ತಾಲೂಕಿನ ರಾಂಪುರ ಪಿ.ಎ ಸರಕಾರಿ ಹಿರಿಯ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಸಂಗಮ ಸಿಂದಗಿ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಶಾಲೆ ಕಡೆ ನಮ್ಮ ನಡೆ ಜಾಥ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಂಪುರ ಸರಕಾರಿ ಪ್ರೌಡ ಶಾಲೆಯಲ್ಲಿ ಮಕ್ಕಳು ತುಂಬಾ ಪ್ರಗತಿ ಕಾಣುತ್ತಿದ್ದಾರೆ. ಅದ್ದರಿಂದ ಸುತ್ತಮುತ್ತಲಿನ ಗ್ರಾಮಗಳ ಮಕ್ಕಳು ಸಹ ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಾಥಾ ಕಾರ್ಯಕ್ರಮವನ್ನು ತಾಲೂಕಿನ ಬೆನಕೊಟಗಿ, ರಾಂಪೂರ ತಾಂಡಾ, ಬಬಲೇಶ್ವರ, ಬೆನಕೊಟಗಿ ತಾಂಡಾ, ರಾಂಪುರ ಪಿಎ, ಗಣಿಹಾರ, ಗಣಿಹಾರ ತಾಂಡಾ, ಓತಿಹಾಳ, ಬೂದಿಹಾಳ, ಬಂದಾಳ ಮತ್ತು ಚಿಕ್ಕಸಿಂದಗಿ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಯಿತು. ಈ ವೇಳೆ ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಮುಖ್ಯ ಗುರುಗಳು, ಸಹ ಶಿಕ್ಷಕರು, ಸಂಗಮ ಸಂಸ್ಥೆ ಕಾರ್ಯಕರ್ತರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

