ತಿಕೋಟಾ: ರಾಜ್ಯಾಧ್ಯಂತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುವ ದೈಹಿಕ ಶಿಕ್ಷಣ ಶಿಕ್ಷಕರನ್ನು ಸಹ ಶಿಕ್ಷಕರು ಎಂದು ಪರಿಗಣಿಸಿ ಮುಖ್ಯ ಶಿಕ್ಷಕರ ಮುಂಬಡ್ತಿ ಸೇರಿದಂತೆ ಸಹ ಶಿಕ್ಷಕರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ದೈಹಿಕ ಶಿಕ್ಷಣ ಶಿಕ್ಷಕರಿಗೆ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ವಿಜಯಪುರ ಗ್ರಾಮೀಣ ವಲಯ ಘಟಕದಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದಿನಿ ಬಳೂಲಮಟ್ಟಿಯವರ ಮೂಲಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸೋಮವಾರ ಮನವಿ ಸಲ್ಲಿಸಿದರು.
ದೈಹಿಕ ಶಿಕ್ಷಣ ಶಿಕ್ಷಕರ ವೃಂದ ಮತ್ತು ನೇಮಕಾತಿ ಬದಲಾವಣೆ ಹಾಗೂ ನೇಮಕಾತಿ ಮತ್ತು ಅನೇಕ ಬೇಡಿಕೆಗಳನ್ನು ಈಡೇರಿಸುವವರೆಗೂ ಪ್ರಸ್ತುತ ಸಾಲಿನ ಇಲಾಖಾ ಕ್ರೀಡಾಕೂಟಗಳನ್ನು ಬಹಿಷ್ಕರಿಸುವ ಮೂಲಕ ಅನಿರ್ದಿಷ್ಟಾವಧಿ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಮಾರುತಿ ಜಾಧವ, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ಯಾತನೂರ ಖಜಾಂಚಿ ಎಸ್. ಎಸ್. ಬಿರಾದಾರ , ದೈಹಿಕ ಶಿಕ್ಷಣ ಪರೀವಿಕ್ಷಕ ಚಂದ್ರಶೇಖರ್ ಕೋರೆ, ಬಿ.ಎನ್.ಹಿರೇಮಠ, ಎ.ಜಿ.ಪೆಂಡಾರಿ, ಜಿ.ಸಿ.ಬಿರಾದಾರ. ರಾಜು.ಎಚ್, ಸಾವಳಗಿ, ಎಸ್.ಎಂ. ಬಿರಾದಾರ, ಎ.ಟಿ.ಲಗಟಗೇರಿ, ಶೈಲಾ ಭಾಸಗಿ, ಇತರರು ಇದ್ದರು.
Subscribe to Updates
Get the latest creative news from FooBar about art, design and business.
ಸಹ ಶಿಕ್ಷಕರಿಗೆ ಸಿಗುವ ಸೌಲಭ್ಯ ದೈಹಿಕ ಶಿಕ್ಷಕರಿಗೂ ನೀಡಲು ಮನವಿ
Related Posts
Add A Comment

