ಸಿಂದಗಿ: ಮಾಜಿ ಸಚಿವ ದಿ.ಎಂ.ಸಿ.ಮನಗೂಳಿ ಅವರು ರೈತರ ಒಡನಾಡಿಯಾಗಿ, ಗ್ರಾಮ ಸೇವಕರಾಗಿ ಕಾರ್ಯನಿರ್ವಹಿಸಿ ರಾಜಕೀಯಕ್ಕೆ ಪ್ರವೇಶ ಮಾಡಿದಾಗಿಂದ ಅವರ ಅಭಿಮಾನಿಯಾಗಿರುವ ನಿವೃತ್ತ ಕೃಷಿ ಅಧಿಕಾರಿ ವ್ಹಿ.ಬಿ.ಕುರುಡೆ ಅವರನ್ನು ತಾಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ನಿರ್ದೇಶಕರನ್ನಾಗಿ ಆಯ್ಕೆ ಮಾಡಿದ ಸಂಸ್ಥೆಯ ಅಧ್ಯಕ್ಷ ಅಶೋಕ ಮನಗೂಳಿ ಅವರು ಅವರ ತಂದೆಯವರ ಗೌರವವನ್ನು ಹೆಚ್ಚಿಸಿದ್ದಾರೆ ಎಂದು ಪಂಚಮಸಾಲಿ ಸಮಾಜದ ತಾಲೂಕಾಧ್ಯಕ್ಷ ಎಂ.ಎಂ.ಹಂಗರಗಿ ಹೇಳಿದರು.
ಪಟ್ಟಣದ ಕುರುಡೆ ಕಾಂಪ್ಲೇಕ್ಸನಲ್ಲಿ ನೂತನವಾಗಿ ಟಿಎಸ್‌ಪಿ ಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಪಂಚಮಸಾಲಿ ಸಮಾಜದ ವತಿಯಿಂದ ಹಮ್ಮಿಕೊಂಡ ಸನ್ಮಾನ ಸಮಾರಂಭದಲ್ಲಿ ಗೌರವಿಸಿ ಮಾತನಾಡಿದ ಅವರು, ವ್ಹಿ.ಬಿ.ಕುರುಡೆ ಅವರು ಸತತ ೩೨ ವರ್ಷಗಳ ಕಾಲ ಕೃಷಿ ಇಲಾಖೆಯಲ್ಲಿ ರೈತರ ಒಡನಾಡಿಯಾಗಿ ಕೆಲಸ ಮಾಡಿದ್ದಾರೆ. ದಿ.ಎಂ.ಸಿ. ಮನಗೂಳಿ ಅವರು ರೈತರ ಒಡನಾಡಿಯಾಗಿದ್ದರು. ಕಾರಣ ಇವರನ್ನು ನಿರ್ದೇಶಕರನ್ನಾಗಿ ಆಯ್ಕೆಮಾಡಿದ್ದರಿಂದ ತಾಲೂಕಿನ ರೈತರಿಗೆ ಗೌರವ ಸಲ್ಲಿಸಿದಂತಾಗಿದೆ. ಶಾಸಕ ಹಾಗೂ ಸಂಸ್ಥೆಯ ಅಧ್ಯಕ್ಷ ಅಶೋಕ ಮನಗೂಳಿ ಅವರು ಈ ನಿರ್ಣಯ ತೆಗೆದುಕೊಂಡದ್ದು ಸಂತಸ ತಂದಿದೆ ಎಂದರು.
ಸನ್ಮಾನವನ್ನು ಸ್ವೀಕರಿಸಿದ ನಿರ್ದೇಶಕ ನಿವೃತ್ತ ಕೃಷಿ ಅಧಿಕಾರಿ ವ್ಹಿ.ಬಿ.ಕುರುಡೆ ಮಾತನಾಡಿ, ದಿ.ಎಂ.ಸಿ.ಮನಗೂಳಿ ಕಾಕಾ ಅವರ ಅಭಿಮಾನಿಯಾಗಿದ್ದ ನನ್ನನ್ನು ತಾಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ನಿರ್ದೇಶಕರನ್ನಾಗಿ ಆಯ್ಕೆ ಮಾಡಿದ ಸಂಸ್ಥೆಯ ಅಧ್ಯಕ್ಷ, ಶಾಸಕ ಅಶೋಕ ಮನಗೂಳಿ ನನಗೆ ಇನ್ನೂ ಸಮಾಜದ ಹಾಗೂ ತಾಲೂಕಿನಲ್ಲಿ ಸಕ್ರೀಯವಾಗಿ ಕೆಲಸ ಮಾಡಲು ಅನುವು ಮಾಡಿಕೊಟ್ಟಿದ್ದಾರೆ. ಅವರಿಗೆ ಅಭಿನಂದನೆಗಳು ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಗುತ್ತಿಗೆದಾರ ಆರ್.ಡಿ.ದೇಸಾಯಿ, ಅರವಿಂದ ಹಂಗರಗಿ, ಶಂಕರ ಕುರುಡೆ, ಚೇತನಗೌಡ ಪಾಟೀಲ, ರುದ್ರಗೌಡ ಬಿರಾದಾರ, ಶಿವರಾಜ ಪೊಲೀಸಪಾಟೀಲ, ರಾಮಚಂದ್ರ ಕಲಬುರ್ಗಿ ಸೇರಿದಂತೆ ಅನೇಕರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

