ಇಂಡಿ: ಅದ್ದೂರಿಯಾಗಿ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಆಚರಿಸುವ ಸಂಬಂಧ ತಹಶೀಲ್ದಾರ ಬಿ ಎಸ್ ಕಡಕಭಾವಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಜರುಗಿತು.
ಸೋಮವಾರ ಪಟ್ಟಣದ ತಾಲೂಕು ಆಡಳಿತ ಸೌಧದ ಸಭಾಭವನದಲ್ಲಿ ಜು-27 ರಂದು ಸರಕಾರದ ನಿರ್ದೇಶನದಂತೆ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯದಾದ್ಯಂತ ಜುಲೈ 27 ರಂದು ನಾಡುಪ್ರಭು ಕೆಂಪೇಗೌಡ ಜಯಂತಿ ಸರಕಾರದ ನಿರ್ದೇಶನದಂತೆ ಜರುಗುತ್ತದೆ. ಅದರಂತೆ ನಮ್ಮ ತಾಲೂಕಿನ ಎಲ್ಲಾ ಸರಕಾರಿ ಶಾಲಾ ಕಾಲೇಜು ಮತ್ತು ಕಛೇರಿಗಳಲ್ಲಿ, ಗ್ರಾಮ ಪಂಚಾಯತ್ ಮತ್ತು ತಾಲೂಕು ಕಛೇರಿಯಲ್ಲಿ ಸರಕಾರದ ನಿರ್ದೇಶನದಂತೆ, ಯಾವುದೇ ಲೋಪವಾಗದಂತೆ ವ್ಯವಸ್ಥಿತವಾಗಿ ಕೆಂಪೇಗೌಡ ಜಯಂತಿ ಆಚರಣೆ ಮಾಡಬೇಕು. ಇನ್ನೂ ಪಟ್ಟಣದಲ್ಲಿ ಪ್ರಮುಖ ವೃತ್ತಗಳು ಅಲಂಕಾರಗೊಳಿಸಿಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಎಲ್ಲಾ ಶಾಲಾ, ಕಾಲೇಜು ಮತ್ತು ಕಛೇರಿಗಳಲ್ಲಿ 9 ಘಂಟೆಗೆ ಆಚರಣೆ ಮಾಡಬೇಕು. ತದನಂತರ ತಾಲೂಕು ಆಡಳಿತ ಸೌಧದಲ್ಲಿ 10 ಘಂಟೆಗೆ ಜರುಗುವ ಕೆಂಪೇಗೌಡ ಜಯಂತಿಯಲ್ಲಿ ಪಾಲ್ಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಿರೂಪಣೆ ಶಿರಸ್ತೆದಾರ ಬಿ.ಎ ರಾವೂರ ಮಾಡಿದರು.
ಈ ಸಂದರ್ಭದಲ್ಲಿ ತಾ.ಪಂ ವ್ಯವಸ್ಥಾಪಕ ಎಮ್ ವಿ ನಾಯರಣಪೂರ, ಕೆಇಬಿ ಎಸ್ ಆರ್ ಮೆಂಡೆದಾರ, ಸಾಮಾಜಿಕ ಕಾರ್ಯಕರ್ತ ಚಂದ್ರಶೇಖರ ಹೋಸಮನಿ ಹಾಗೂ ತಾಲೂಕು ಎಲ್ಲಾ ಇಲಾಖೆಯ ಅಧಿಕಾರಿಗಳು, ವಿವಿಧ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

