ಇಂಡಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಗಣಿತ ವಿಷಯದಲ್ಲಿ ಸರಾಸರಿ ಅಂಕಗಳನ್ನು ಪಡೆದ ರಾಜ್ಯದ ಒಟ್ಟು ೮೩೦ ವಸತಿ ಶಾಲೆಗಳಲ್ಲಿ ಕಿತ್ತೂರ ರಾಣಿ ಚನ್ನಮ್ಮ ಶಾಲೆಯು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು ಶಾಲೆಯ ಪ್ರಾಂಶುಪಾಲರು ಸಿ ಸಿ ಸೇಠ್ ಪತ್ರಿಕೆ ಪ್ರಕಟಣೆ ಗೆ ತಿಳಿಸಿದ್ದಾರೆ.
ತಾಲೂಕಿನ ಅಂಜುಟಗಿ ಗ್ರಾಮದ ಕಿತ್ತೂರ್ ರಾಣಿ ಚನ್ನಮ್ಮ ವಸತಿ ಶಾಲೆಯು ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಂಯುಕ್ತ ಅಶ್ರಯದಲ್ಲಿ ನಡೆದ ೨೦೨೩-೨೦೨೪ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಹಮ್ಮಿಕೊಳ್ಳಲಾದ ಸನ್ಮಾನ ಸಮಾರಂಭದಲ್ಲಿ ಗಣಿತ ಶಿಕ್ಷಕ ಶ್ರೀ ಸೈಫನ್ ಮುಲ್ಕ ಬಿಂಗೊಳಗಿ ಅವರನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಭಾ ಪುರಸ್ಕಾರ ಪ್ರಶಸ್ತಿ ಪ್ರಧಾನ ಮಾಡಿ ಪ್ರೊತ್ಸಾಹಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಎಸ್ ಸಿ ಮಹದೇವಪ್ಪ ಹಾಗೂ ಶಾಸಕರು ಮತ್ತು ಇಲಾಖೆಯ ಅಧಿಕಾರಿಗಳು ಉಸ್ಥಿತರಿದ್ದರು. ಪ್ರಾಂಶುಪಾಲರು ಸಿ ಸಿ ಸೇಠ್, ಹಾಗೂ ಎಲ್ಲಾ ಭೋದಕ ಬೋದಕೇತರ ಸಿಬ್ಬಂದಿ ವರ್ಗದವರು ಸಾಧನೆಗೈದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕ ಸೈಫನ್ ಮುಲ್ಕ ಬಿಂಗೊಳಗಿ ಅವರನ್ನು ಶುಭ ಹಾರೈಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

