Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾನೂನು ಉಲ್ಲಂಘನೆ ಮಾಡಿದವರು ಯಾರೇ ಇದ್ದರೂ ಕ್ರಮ :ಡಿವೈಎಸ್ಪಿ
(ರಾಜ್ಯ ) ಜಿಲ್ಲೆ

ಕಾನೂನು ಉಲ್ಲಂಘನೆ ಮಾಡಿದವರು ಯಾರೇ ಇದ್ದರೂ ಕ್ರಮ :ಡಿವೈಎಸ್ಪಿ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಕಾನೂನು ಉಲ್ಲಂಘನೆ ಮಾಡಿದವರು ಯಾರೇ ಇದ್ದರೂ ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುವುದು. ವಿನಾ ಕಾರಣ ನಮ್ಮ ಸಿಬ್ಬಂದಿ ಯಾರ ಮೇಲೂ ದರ್ಪ ತೋರುವದಿಲ್ಲ. ಎಲ್ಲ ಬಿಟ್ ಪೊಲೀಸರು, ರಾತ್ರಿ ಗಸ್ತು ಸಿಬ್ಬಂದಿಗಳು ತಮ್ಮ ಕರ್ತವ್ಯ ಸರಿಯಾಗಿ ನಿರ್ವಹಿಸಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಪೊಲೀಸ್ ಇಲಾಖೆಯ ಉಪವಿಭಾಗವು ಶನಿವಾರ ಸಂಜೆ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಕುಂದುಕೊರತೆಗಳ ಸಭೆಯಲ್ಲಿ ಮಾತನಾಡಿದ ಅವರು, ಇಲಾಖೆಯು ಯಾವಾಗಲೂ ದಲಿತ ಬಾಂಧವರು ಸೇರಿದಂತೆ ಎಲ್ಲ ಜನರಿಗೂ ನ್ಯಾಯ ಒದಗಿಸಿಕೊಡುವಲ್ಲಿ ಸದಾ ಸಿದ್ದವಿದೆ. ಇದರ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಮರಳು ಮಾಫಿಯಾದ ಬಗ್ಗೆ ಸಭೆಯ ಗಮನಕ್ಕೆ ತಂದವರು ಸೂಕ್ತ ದಾಖಲೆಯನ್ನು ನೀಡಿದರೆ ಖಂಡಿತ ಇದರಲ್ಲಿ ಭಾಗಿಯಾದವರ ಮೇಲೆ ಸೂಕ್ತ ಕ್ರಮ ಖಂಡಿತ ತೆಗೆದುಕೊಳ್ಳುತ್ತೇವೆ. ಎಲ್ಲರೂ ರಸ್ತೆ ನಿಯಮಗಳನ್ನು ಪಾಲಿಸುವದು ತುಂಬಾ ಮುಖ್ಯವಾಗಿದೆ. ಪಟ್ಟಣದಲ್ಲಿ ಸೋಮವಾರ ಸಂತೆ ದಿನ ಅನೇಕ ಕಡೆಗಳಲ್ಲಿ ಕೈಗಾಡಿಯಲ್ಲಿ ವ್ಯಾಪಾರ ವಹಿವಾಟು ಮಾಡುತ್ತಿರುವದರಿಂದಾಗಿ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿರುವುದು ಗಮನಕ್ಕೆ ಬಂದಿದೆ. ಮಾನವೀಯ ದೃಷ್ಟಿಯಿಂದ ಕೈಗಾಡಿಯಲ್ಲಿ ವ್ಯಾಪಾರ ಮಾಡುವವರ ಮೇಲೆ ಇದುವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಅವರು ಟ್ರಾಫಿಕ್ ಸಮಸ್ಯೆಯಾಗದಂತೆ ತಮ್ಮ ವ್ಯಾಪಾರ ಮಾಡಿಕೊಂಡು ಹೋಗಬೇಕೆಂದರು.
ಪಟ್ಟಣದ ಬಸವೇಶ್ವರ ವೃತ್ತ, ಡಾ.ಅಂಬೇಡ್ಕರ ವೃತ್ತ,ಇಂಗಳೇಶ್ವರದ ಚನ್ನಮ್ಮ ವೃತ್ತ, ಬಸ್ ನಿಲ್ದಾಣ ಸೇರಿದಂತೆ ಪಟ್ಟಣಕ್ಕೆ ವಿವಿಧೆಡೆಗಳಿಂದ ಸಂಪರ್ಕ ಕಲ್ಪಿಸುವ ರಸ್ತೆ ಸೇರಿದಂತೆ ವಿವಿಧೆಡೆ ಅಳವಡಿಸಲು ಅಂದಾಜು ೨೫ ಸಿಸಿ ಕ್ಯಾಮರಾಗಳು ಬೇಕಾಗಬಹುದು. ಈಗಾಗಲೇ ಬಸವೇಶ್ವರ ವೃತ್ತ, ಡಾ.ಅಂಬೇಡ್ಕರ ವೃತ್ತದಲ್ಲಿ ಪುರಸಭೆ ಸಿಸಿ ಕ್ಯಾಮರಾ ಅಳವಡಿಸಿದೆ. ಮುಂದಿನ ದಿನಗಳಲ್ಲಿ ಉಳಿದೆಡೆ ಪುರಸಭೆ ಸಿಸಿ ಕ್ಯಾಮರಾ ಅಳವಡಿಸಬೇಕು. ಇದರಿಂದಾಗಿ ರಸ್ತೆ ಅಪಘಾತ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಲು ಇಲಾಖೆಗೆ ಅನುಕೂಲವಾಗುತ್ತದೆ. ಬೇರೆ ಊರಿಗೆ ಹೋಗಬೇಕಾದ ಸಂದರ್ಭ ಬಂದು ಮನೆಗೆ ಬೀಗ ಹಾಕುವ ಸಂದರ್ಭ ಬಂದರೆ ಆ ಮನೆಯವರು ಮನೆಯ ಮುಂದೆ ಲೈಟ್ ಹಾಕಿ ಹೋಗಬೇಕು. ಇದು ಮನೆ ಕಳ್ಳತನ ಪ್ರಕರಣ ತಪ್ಪಿಸಲು ಸಹಕಾರವಾಗುತ್ತದೆ. ಈಚೆಗೆ ಮನೆ ಕಳ್ಳತನವಾಗುತ್ತಿರುವ ಬಗ್ಗೆ ಕೆಲ ದಲಿತ ಮುಖಂಡರು ಸಭೆ ಗಮನಕ್ಕೆ ತಂದಿದ್ದಾರೆ. ಮನೆ ಕಳ್ಳತನ ಮಾಡುವ ಕಳ್ಳರನ್ನು ಪತ್ತೆ ಹಚ್ಚುವಲ್ಲಿ ಇಲಾಖೆಯ ಕಾರ್ಯಪ್ರವೃತ್ತವಾಗಿದೆ. ದಲಿತ ಬಾಂಧವರು ಸಭೆಯ ಗಮನಕ್ಕೆ ತಂದಿರುವ ಎಲ್ಲ ಸಮಸ್ಯೆಗಳಿಗೆ ಪರಿಹಾರ ಒದಗಿಸುವಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ಹೇಳಿದರು.
ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಅವರು ಈಗಾಗಲೇ ಬಸವೇಶ್ವರ ವೃತ್ತ, ಡಾ.ಅಂಬೇಡ್ಕರ ವೃತ್ತದಲ್ಲಿರುವ ಸಿಸಿ ಕ್ಯಾಮರಾಗಳನ್ನು ಒಂದು ವಾರದಲ್ಲಿ ರಿಜಾರ್ಜ್ ಮಾಡಿಸಿ ಇದರ ಉಸ್ತುವಾರಿ ನೋಡಿಕೊಳ್ಳಲು ಪೊಲೀಸ್ ಇಲಾಖೆಗೆ ಹಸ್ತಾಂತರಿಸಲಾಗುವುದು. ಮುಂಬರುವ ದಿನಗಳಲ್ಲಿ ವಿವಿಧೆಡೆ ಕ್ಯಾಮರಾ ಅಳವಡಿಸುವ ಕುರಿತು ಪೊಲೀಸ್ ಇಲಾಖೆಯೊಂದಿಗೆ ಸಮಾಲೋಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವದು ಎಂದರು.
ಡಿಎಸ್ಎಸ್ ಮುಖಂಡ ಅರವಿಂದ ಸಾಲವಾಡಗಿ ಮಾತನಾಡಿ, ಜಾತಿ ನಿಂದನೆ ಪ್ರಕರಣ ದಾಖಲಾದ ಸಂದರ್ಭದಲ್ಲಿ ರಾಜಕೀಯ ಒತ್ತಡದಿಂದ ಪೊಲೀಸ್ ಇಲಾಖೆಯ ಕೆಲವರು ಕೌಂಟರ್ ಪ್ರಕರಣ ದಾಖಲು ಮಾಡಿಕೊಳ್ಳುವ ಮೂಲಕ ದಲಿತ ಬಾಂಧವರಿಗೆ ನ್ಯಾಯ ಒದಗಿಸಲು ಮುಂದಾಗುತ್ತಿಲ್ಲ. ದೌರ್ಜನ್ಯಕ್ಕೆ ಒಳಗಾದವರಿಗೆ ಇಲಾಖೆಯು ನ್ಯಾಯ ಸಿಗುವಂತೆ ಮಾಡಬೇಕು.ಇಲಾಖೆಯು ರಾಜಕಾರಣಿಗಳ ಕೈಗೊಂಬೆಯಾಗದೇ ದಲಿತ ಬಾಂಧವರಿಗೆ ಅನ್ಯಾಯವಾದರೆ ಅವರಿಗೆ ನ್ಯಾಯ ಸಿಗುವಂತೆ ಮುಂದಾಗಬೇಕು. ಪಟ್ಟಣದಲ್ಲಿ ಸಿಸಿ ಕ್ಯಾಮರಾ ಅಳವಡಿಸಬೇಕೆಂದರು.
ಡಿಎಸ್ಎಸ್ ಮುಖಂಡ ಪರಶುರಾಮ ದಿಂಡವಾರ ಮಾತನಾಡಿ, ಪಟ್ಟಣದಲ್ಲಿ ನಿರ್ಮಾಣವಾಗಿರುವ ಬಸವ ಭವನಕ್ಕೆ ಎಸ್ಸಿಎಸ್ಟಿ ಅನುದಾನ ಬಳಕೆಯಾಗಿದೆ. ಈ ಭವನಕ್ಕೆ ಬುದ್ಧ-ಬಸವ-ಅಂಬೇಡ್ಕರ ಎಂದು ನಾಮಕರಣ ಮಾಡಬೇಕು. ಭವನದ ಕೆಳಗೆ ಇರುವ ಊಟದ ಹಾಲ್ಗೆ ಡಾ.ಬಾಬುಜಗಜೀವನರಾಮ ಅವರು ಹೆಸರು ಇಡಬೇಕು. ಸಮುದಾಯ ಭವನಗಳಲ್ಲಿ ಇಸ್ಪೀಟ್ ಆಡುವವರು ಕಂಡುಬರುತ್ತಿದ್ದಾರೆ. ಇವರ ಮೇಲೆ ಪೊಲೀಸ್ ಇಲಾಖೆಯ ಕ್ರಮ ತೆಗೆದುಕೊಳ್ಳಬೇಕು. ತಾಲೂಕಿನಲ್ಲಿ ಅಕ್ರಮವಾಗಿ ಅಕ್ಕಿ ಮಾರಾಟ,ದಾಸ್ತಾನು ಮಾಡಲಾಗುತ್ತಿದೆ. ಅಽಕಾರಿಗಳು ಇದರ ಕಡೆಗೆ ಗಮನ ಹರಿಸಿ ಕ್ರಮ ತೆಗೆದುಕೊಳ್ಳಬೇಕೆಂದರು.
ಎಸ್.ಎ.ದೇಗಿನಾಳ ಮಾತನಾಡಿ, ಈಚೆಗೆ ಗುಳಬಾಳದಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳನ್ನು ಮೂರು-ನಾಲ್ಕು ದಿನಗಳಲ್ಲಿ ಹಿಡಿದ ಪೊಲೀಸ್ ಇಲಾಖೆಯ ಅಧಿಕಾರಿಗಳ ಕ್ರಮ ಶ್ಲಾಘನೀಯ.ಪಟ್ಟಣದ ನಂದಿ ಬಡಾವಣೆಯಲ್ಲಿ ದಲಿತ ಬಾಂಧವರು, ಮುಸ್ಲಿಂ ಬಾಂಧವರು ಸೇರಿದಂತೆ ಎಲ್ಲ ವರ್ಗದ ಜನರು ವಾಸವಾಗಿದ್ದಾರೆ. ಈ ಬಡಾವಣೆಗೆ ಸರಿಯಾದ ರಸ್ತೆಯಲ್ಲಿದೇ ಇರುವದರಿಂದಾಗಿ ಅಟೋ ಸಹ ಹೋಗುತ್ತಿಲ್ಲ. ಪುರಸಭೆ ಅಧಿಕಾರಿಗಳು ಕೂಡಲೇ ರಸ್ತೆ ಮಾಡದೇ ಹೋದರೂ ಗರಸು ಹಾಕಿ ಸಂಚಾರ ಮಾಡಲು ಅನುಕೂಲ ಮಾಡಿಕೊಡಬೇಕು. ತಾಲೂಕಿನ ಇಂಗಳೇಶ್ವರ-ಉಕ್ಕಲಿ ರಸ್ತೆಯಲ್ಲಿ ತಗ್ಗು ಇರುವದರಿಂದಾಗಿ ಸಂಚಾರ ಮಾಡಲು ತೊಂದರೆಯಾಗಿದೆ. ಇದರ ಕಡೆಗೂ ಗಮನ ಹರಿಸಬೇಕೆಂದರು.
ಸಭೆಯಲ್ಲಿ ಪುರಸಭೆ ಸದಸ್ಯ ನೀಲಪ್ಪ ನಾಯಕ, ಮುಖಂಡರಾದ ಮಹಾಂತೇಶ ಸಾಸಾಬಾಳ, ಗುರುರಾಜ ಗುಡಿಮನಿ, ಅಶೋಕ ಚಲವಾದಿ, ರವಿ ರಾಠೋಡ, ಉಮೇಶ ನಡುವಿನಮನಿ, ಸಿದ್ರಾಮಪ್ಪ ಪಾತ್ರೋಟಿ, ಪರಶುರಾಮ ಜಮಖಂಡಿ, ಅಮರೇಶ ಕಾಮನಕೇರಿ, ವಿದ್ಯಾವಂತ ದೊಡಮನಿ ಇತರರು ವಿವಿಧ ಸಮಸ್ಯೆಗಳ ಕುರಿತು ಸಭೆಯ ಗಮನಕ್ಕೆ ತಂದರು. ಸಭೆಯ ಅಧ್ಯಕ್ಷತೆಯನ್ನು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ವಹಿಸಿದ್ದರು. ಸಭೆಯಲ್ಲಿ ಪಿಐ ವಿಜಯ ಮುರಗುಂಡಿ, ಕೂಡಗಿ ಪಿಎಸ್ಐ ಯತೀಶ ಕೆ.ಎನ್,, ಪಿಎಸ್ಐಗಳಾದ ಆರ್.ಎಸ್.ಬೀಳಗಿ, ಮನೋಹರ ಕಂಚಗಾರ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ
    In (ರಾಜ್ಯ ) ಜಿಲ್ಲೆ
  • ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ
    In (ರಾಜ್ಯ ) ಜಿಲ್ಲೆ
  • ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ
    In ವಿಶೇಷ ಲೇಖನ
  • ಅತಿಯಾದ ಯೋಚನೆಗೆ ಹಾಕಿ ಪೂರ್ಣ ವಿರಾಮ
    In ವಿಶೇಷ ಲೇಖನ
  • ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ
    In (ರಾಜ್ಯ ) ಜಿಲ್ಲೆ
  • ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ
    In (ರಾಜ್ಯ ) ಜಿಲ್ಲೆ
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.