ವಿಜಯಪುರ: ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಪ್ರಗತಿ ಮತ್ತು ಫೇಕೊ ವಿಷಯ ಕುರಿತ ಮುಂದುವರೆದ ವೈದ್ಯಕೀಯ ಶಿಕ್ಷಣ ಕಾರ್ಯಾಗಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಶನಿವಾರ ನಡೆಯಿತು.
ವಿವಿಯ ನೇತ್ರಶಾಸ್ತ್ರ ವಿಭಾಗದ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮವನ್ನು ವಿವಿಯ ಸಮುಕುಲಾಧಿಪತಿ ಡಾ. ವೈ. ಎಂ. ಜಯರಾಜ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ವಿವಿಯ ಕುಲಪತಿ ಡಾ. ಆರ್. ಎಸ್. ಮುಧೋಳ, ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ತಿರಿವನಂತಪುರಂ ನ ಡಾ. ಅರುಪ ಚರ್ಕವರ್ತಿ, ಹುಬ್ಬಳ್ಳಿಯ ನೇತ್ರ ವೈದ್ಯರಾದ ಡಾ. ಆರ್. ಕೃಷ್ಣಪ್ರಸಾದ ಮತ್ತು ಧಾರವಾಡದ ಡಾ.ಸಂಜೀವ ಕುಲಕರ್ಣಿ ಉಪಸ್ಥಿತರಿದ್ದರು.
ಉತ್ತರ ಕರ್ನಾಟಕ ಮತ್ತು ಮಹಾರಾಷ್ಟ್ರದ ನಾನಾ ಭಾಗಗಳಿಂದ ಆಗಮಿಸಿದ ಸುಮಾರು 100ಕ್ಕೂ ಹೆಚ್ಚು ಪ್ರತಿನಿಧಿಗಳು ಸಂಕಿರ್ಣವಾಗಿರುವ ಕಣ್ಣಿನ ಪೊರೆ ಪ್ರಕರಣಗಳು ಮತ್ತು ಅತ್ಯಾಧುನಿಕ ತಂತ್ರಜ್ಞಾನ ಬಳಸಿ ರೋಗಿಗಳಿಗೆ ಚಿಕಿತ್ಸೆ ನೀಡುವ ಕುರಿತು ವಿಚಾರ ವಿನಿಮಯ ಮಾಡಿದರು.
ನೇತ್ರಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ರೇಖಾ ಮುಧೋಳ ಸ್ವಾಗತಿಸಿದರು. ಡಾ. ರಾಘವೇಂದ್ರ ಕೆ. ಇಜೇರಿ ವಂದಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

