ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯಕ್ಕೆ ವೈಜ್ಞಾನಿಕ ಮತ್ತು ಕೈಗಾರಿಕೆ ಸಂಶೋಧನೆ ಸಂಸ್ಥೆ (ಸೈರೊ) ಮಾನ್ಯತೆ ಲಭಿಸಿದೆ.
ಭಾರತ ಸರಕಾರದ ವೈಜ್ಞಾನಿಕ ಮತ್ತು ಕೈಗಾರಿಕೆ ಸಂಶೋಧನೆ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಈ ಮಾನ್ಯತೆ ನೀಡಿದೆ. ಈ ಮಾನ್ಯತೆಯಿಂದಾಗಿ ವಿವಿಗೆ ಸಂಶೋಧನೆ ಉಪಕರಣಗಳು, ಬಿಡಿ ಭಾಗಗಳು, ಪರಿಕರಗಳು ಮತ್ತು ಇತರೆ ವಸ್ತುಗಳ ಖರೀದಿಯ ಮೇಲೆ ಕಸ್ಟಮ್ಸ್ ಸುಂಕ ವಿನಾಯಿತಿ ದೊರೆಯುತ್ತದೆ. ಇದರಿಂದ ವಿಶ್ವವಿದ್ಯಾಲಯವು ಆಂತರಿಕ ಸಂಶೋಧನೆಯನ್ನು ಕೈಗೊಳ್ಳಲು ಉತ್ತೇಜನ ಸಿಗಲಿದೆ. ಅಲ್ಲದೇ, ವೈಜ್ಞಾನಿಕ ಸಮುದಾಯದಲ್ಲಿ ವಿಶ್ವಾಸಾರ್ಹತೆ ಮತ್ತು ಖ್ಯಾತಿ ಹೆಚ್ಚಲಿದೆ. ಇದರ ಜೊತೆಗೆ ಸರಕಾರ ಮತ್ತು ಹಣಕಾಸು ನೆರವು ಒದಗಿಸುವ ಸಂಸ್ಥೆಗಳಿಂದ ಸಂಶೋಧನೆಗಳಿಗಾಗಿ ಹಣಕಾಸಿನ ನೆರವನ್ನು ಸಹ ಪಡೆಯಬಹುದಾಗಿದೆ.
ವಿಶ್ವವಿದ್ಯಾಲಯವು ಕೈಕೊಂಡ ಸಂಶೋಧನೆಗಾಗಿ ಮತ್ತು ಅನುಸರಿಸಿದ ಮಾನದಂಡಗಳಿಗೆ ಅನುಗುಣವಾಗಿ ಈ ಮಾನ್ಯತೆ ದೊರೆತಿದೆ. ಇದರಿಂದ ಸಂಶೋಧನೆಗಳನ್ನು ಕೈಗೊಳ್ಳಲು ಮೂಲ ಸೌಕರ್ಯಗಳನ್ನು ಒದಗಿಸುವುದರ ಮೂಲಕ ಸಂಶೋಧನೆಗೆ ಪ್ರೋತ್ಸಾಹ ನೀಡುತ್ತದೆ.
ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯಕ್ಕೆ ಸೈರೊ ಮಾನ್ಯತೆ ದೊರೆತಿರುವುದಕ್ಕೆ ವಿವಿಯ ಕುಲಾಧಿಪತಿ ಎಂ. ಬಿ. ಪಾಟೀಲ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ವಿವಿ ಮುಂದೆಯೂ ಕೂಡ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಉತ್ಕೃಷ್ಟತೆಗಾಗಿ ಶ್ರಮಿಸಲಿದೆ ಎಂದು ತಿಳಿಸಿದ್ದಾರೆ.
ವಿವಿಯ ಈ ಸಾಧನೆಗೆ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಡಾ. ಆರ್. ಎಸ್. ಮುಧೋಳ, ಸಮಕುಲಪತಿ ಡಾ. ಅರುಣ ಚಂ. ಇನಾಮದಾರ ಅವರು ಅಧಿಕಾರಿ ಮತ್ತು ಸಿಬ್ಬಂದಿ ವರ್ಗಕ್ಕೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ ಎಂದು ವಿವಿ ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಬಿ.ಎಲ್.ಡಿ.ಇ ಡೀಮ್ಡ್ ವಿವಿಗೆ ವೈಜ್ಞಾನಿಕ & ಕೈಗಾರಿಕೆ ಸಂಶೋಧನೆ ಸಂಸ್ಥೆ ಮಾನ್ಯತೆ
Related Posts
Add A Comment

