ವಿಜಯಪುರ: ಆರೋಗ್ಯ ಖಾತೆ ಸಚಿವರಾದ ದಿನೇಶ ಗುಂಡೂರಾವ್ ಅವರು ಜೂನ್.೨೮ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಜೂ.೨೮ರಂದು ಬೆಳಿಗ್ಗೆ ೯ ಗಂಟೆಗೆ ವಿಜಯಪುರಕ್ಕೆ ಆಗಮಿಸಿ, ಬೆಳಿಗ್ಗೆ ೧೧ ಗಂಟೆಯವರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಬೆಳಿಗ್ಗೆ ೧೧-೩೦ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ ೩ ಗಂಟೆಗೆ ವಿಜಯಪುರದಿಂದ ಬಾಗಲಕೋಟೆ ಜಿಲ್ಲೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
