ಶಾಲಾ ವಿದ್ಯಾರ್ಥಿಗಳಿಗೆ ಪಾಠ ಮಾಡಿದ ಜಿಲ್ಲಾಧಿಕಾರಿ
ವಿಜಯಪುರ: ಮಂಗಳವಾರ ಚಡಚಣದಲ್ಲಿ ಆಯೋಜಿಸಲಾದ ಜನಸ್ಪಂದನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಬರಡೋಲದ ಕರ್ನಾಟಕ ಪಬ್ಲಿಕ್ ಶಾಲೆ ಭೇಟಿ ನೀಡಿ, ಶಾಲೆಯಲ್ಲಿ ಒದಗಿಸಿರುವ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.
ಶಾಲಾ ಮಕ್ಕಳಿಗೆ ಪಾಠ ಮಾಡಿದ ಜಿಲ್ಲಾಧಿಕಾರಿ: ಈ ಸಂದರ್ಭದಲ್ಲಿ ಶಾಲಾ ತರಗತಿಗೆ ತೆರಳಿಗೆ ಮಕ್ಕಳೊಂದಿಗೆ ಸಂವಾದ ನಡೆಸಿದ ಅವರು, ಮಕ್ಕಳಿಗೆ ಪಾಠ ಹೇಳುವ ಮೂಲಕ ಪ್ರೊತ್ಸಾಹಿಸಿದ ಅವರು, ವಿದ್ಯಾರ್ಥಿಗಳು ಓದಿನಲ್ಲಿ ತೊಡಗಿಸಿಕೊಂಡು ಶಿಕ್ಷಕರು ಹೇಳಿಕೊಡುವ ಪಾಠ ಮನನ ಮಾಡಿಕೊಂಡು ಕಲಿತ ಶಾಲೆಗೆ ಕೀರ್ತಿ ತರುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಸೇರಿದಂತೆ ಇತರ ಅಧಿಕಾರಿಗಳು ಉಸ್ಥಿತರಿದ್ದರು.

