ದೇವರಹಿಪ್ಪರಗಿ: ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಏರ್ಪಡಿಸುವುದರ ಜೊತೆಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಹಶೀಲ್ದಾರ ಪ್ರಕಾಶ ಸಿಂದಗಿ ಹೇಳಿದರು.
ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಮಂಗಳವಾರ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದಿ:೨೭ ರಂದು ಗುರುವಾರ ರಾಜ್ಯಾದ್ಯಂತ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಿಸಲಾಗುತ್ತಿದ್ದು, ತಾಲ್ಲೂಕು ಆಡಳಿತದ ವತಿಯಿಂದ ಪಟ್ಟಣದ ೧೦೦೮ ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ ೯ ಕಾರ್ಯಕ್ರಮ ಆಯೋಜಿಸಲಾಗಿದೆ. ಇದರಲ್ಲಿ ಸ್ತಬ್ಧಚಿತ್ರ ಪ್ರದರ್ಶನ, ಮಕ್ಕಳಿಗಾಗಿ ಕೆಂಪೇಗೌಡ ವೇಷಭೂಷಣ, ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸಿ ಅವರಿಗೆ ಬಹುಮಾನ ವಿತರಣೆ. ಹಾಗೂ ವಿಶೇಷ ಉಪನ್ಯಾಸದ ಮೂಲಕ ಕೆಂಪೇಗೌಡ ಜೀವನ ಮತ್ತು ಸಾಧನೆಗಳ ಪರಿಚಯದಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಎಲ್ಲ ಕಾರ್ಯಕ್ರಮಗಳಲ್ಲಿ ಪಟ್ಟಣ ಸೇರಿದಂತೆ ತಾಲ್ಲೂಕಿನ ಎಲ್ಲ ಸಂಘ ಸಂಸ್ಥೆಗಳು ಭಾಗವಹಿಸಬೇಕು ಎಂದರು.
ದಲಿತ ಸಂಘರ್ಷ ಸಮೀತಿಯ ಪದಾಧಿಕಾರಿ ಪ್ರಕಾಶ ಗುಡಿಮನಿ ಮಾತನಾಡಿ, ಪೂರ್ವಭಾವಿ ಸಭೆಯಲ್ಲಿ ಕೆಲವು ಇಲಾಖೆಗಳ ಅಧಿಕಾರಿಗಳು ಮಾತ್ರ ಹಾಜರಿದ್ದು, ಉಳಿದವರ ಗೈರುಹಾಜರಿ ಕಾಣುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳ ಹಾಜರಾತಿಗೆ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರಿಗೆ ತಿಳಿಸಿದರು.
ಗ್ರೇಡ-೨ ತಹಶೀಲ್ದಾರ ಎಸ್.ಎಚ್.ರಾಠೋಡ, ಉಪತಹಶೀಲ್ದಾರ ಸುರೇಶ ಮ್ಯಾಗೇರಿ, ಕಸಾಪ ತಾಲ್ಲೂಕು ಅಧ್ಯಕ್ಷ ಜಿ.ಪಿ.ಬಿರಾದಾರ, ಕೃಷಿ ಅಧಿಕಾರಿ ಎಚ್.ಕೆ.ಪಾಟೀಲ, ಕಂದಾಯ ನಿರೀಕ್ಷಕ ಸಂಗಮೇಶ ಗ್ವಾಳೇದ, ಎಎಸ್‌ಐ ಕೆ.ಎಚ್.ಉಪ್ಪಾರ, ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಜಿ.ಎಸ್.ರೋಡಗಿ, ಎನ್.ಆರ್.ಚವ್ಹಾಣ, ಎಸ್.ಎಮ್.ರೋಡಗಿ, ಸಂಜು ರಾಠೋಡ, ಕೆ.ಎಸ್.ವಾಲಿಕಾರ, ಬಿ.ಎಮ್.ವಾಲಿಕಾರ, ರಮೇಶ ಈಳಗೇರ, ಪಿಂಟೂ ಭಾಸುತ್ಕರ್, ಬಸವರಾಜ ತಳಕೇರಿ, ಎಚ್.ಎ.ತಳ್ಳೋಳ್ಳಿ, ಡಿ.ಎಸ್.ಕೇಸರಿ, ರಾವುತ ತಳಕೇರಿ, ಶಿವಾನಂದ ವಾಲೀಕಾರ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

