ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಜುಲೈ ೦೨ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಾ.ಫ.ಗು.ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೧೦ ಗಂಟೆಗೆ ನಡೆಯಲಿರುವ ಜಯಂತಿ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ. ವಿಜಯಪುರ ನಗರ ಶಾಸಕ ಬಸನಗೌಡ ಆರ್.ಪಾಟೀಲ (ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಹಾಗೂ ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತ ಅಧ್ಯಕ್ಷರೂ ಆದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ, ರಾಜ್ಯಸಭಾ ಸಂಸದರಾದ ಶ್ರೀಮತಿ ಸುಧಾ ಮೂರ್ತಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ವಿಠ್ಠಲ ಕಟಕಧೋಂಡ, ಭೀಮನಗೌಡ (ರಾಜುಗೌಡ) ಬಸನಗೌಡ ಪಾಟೀಲ, ಅಶೋಕ ಮಲ್ಲಪ್ಪ ಮನಗೂಳಿ, ಮಹಾನಗರ ಪಾಲಿಕೆ ಮಹಾಪೌರರಾದ ಶ್ರೀಮತಿ ಮಹೇಜಬಿನ ಹೊರ್ತಿ, ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯ್ಕ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನಾನ್ ಅಬ್ದುಲಹಮೀದ್ ಮುಶ್ರೀಫ್ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ಸಂಶೋಳಧನಾ ಕೇಂದ್ರದ ಸಂಯೋಜನಾಧಿಕಾರಿಗಳಾದ ಡಾ.ವಿ.ಡಿ.ಐಹೊಳ್ಳಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಗಾಯಕರಾದ ಕುಮಾರಿ ಸಾಕ್ಷಿ ಹಿರೇಮಠ ಅವರು ವಚನ ಗಾಯನ ನಡೆಸಿಕೊಡಲಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

